ಸುಮಾರು ವರ್ಷಗಳು ಕಳೆದರೂ ಮೂಲ ಸೌಕರ್ಯಗಳಿಲ್ಲದೇ ಸೊರಗಿರುವ ಜಿಲ್ಲಾ ಕೇಂದ್ರವನ್ನು ಪಾರ್ಕಿಂಗ್ ಸಮಸ್ಯೆ ದೊಡ್ಡ ಮಟ್ಟದಲ್ಲೇ ಕಾಡುತ್ತಿದೆ. ನಗರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಕಳೆದ ಎರಡು ವರ್ಷದಿಂದ ಬೃಹತ್ ಕಟ್ಟಡಗಳು, ಶಾಪಿಂಗ್ ಮಾಲ್‌ಗಳಲ್ಲಿ ಯಾವುದೇ ಪಾರ್ಕಿಂಗ್ ವ್ಯವಸ್ಥೆ ಮಾಡದೆ ನಿಮಾರ್ಣ ಮಾಡಿದ್ದರಿಂದ ಶಾಪಿಂಗ್‌ಗೆ ಬರುವ ಜನರ ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮಾರುಕಟ್ಟೆ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಪಾರ್ಕಿಂಗ್ ನಿರ್ವಹಣೆ ನಡೆಯುತ್ತಿಲ್ಲ. ದೊಡ್ಡ ಕಟ್ಟಡಗಳಲ್ಲಿ ಪಾರ್ಕಿಂಗ್‌ಗೆ ಜಾಗ ಕಲ್ಪಿಸಬೇಕು ಎಂಬ ನಿಯಮವಿದ್ದರೂ ಅದು ಇಲ್ಲಿ ಪಾಲನೆಯಾಗುತ್ತಿಲ್ಲ. ನಿಯಮ ಉಲ್ಲಂಘಿಸಿರುವ ಕಟ್ಟಡ ಮಾಲೀಕರಿಗೆ ದಂಡ ಹಾಕುವ ಶ್ರಮವನ್ನೂ ಮಹಾನಗರ ಪಾಲಿಕೆ ತೆಗೆದುಕೊಂಡಿಲ್ಲ. ಜನದಟ್ಟಣೆ ಹೆಚ್ಚಿರುವ ಕೆಲವು ಸ್ಥಳದಲ್ಲಿ ಪೊಲೀಸರು ರಸ್ತೆಯ ಒಂದು ಬದಿಯಲ್ಲಿ ಮಾತ್ರ ಪಾರ್ಕಿಂಗ್‌ಗೆ ಅವಕಾಶ ನೀಡಿದ್ದಾರೆ. ಆದರೆ, ಅದು ಕೂಡ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿಲ್ಲ.