ಗಣರಾಜ್ಯೋತ್ಸವ ನಿಮಿತ್ತ ದೇವದುರ್ಗದ ತಾಲೂಕು ಆಡಳಿತ ಸೌಧದಲ್ಲಿ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ, ಸಮಾಜ ಕಲ್ಯಾಣಾಧಿಕಾರಿ ರಾಜ್‌ಕುಮಾರ್ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಅಧಿಕಾರಿಗಳಿಗೆ ತಹಸೀಲ್ದಾರ್ ನಾಗಮ್ಮ ಸೂಚನೆ
ದೇವದುರ್ಗ ಪೂರ್ವಭಾವಿ ಸಭೆ
ದೇವದುರ್ಗ: ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಸೂಚಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ನಿಮಿತ್ತ ಎಲ್ಲ ಇಲಾಖೆ ಕಚೇರಿಗಳಲ್ಲಿ ದೀಪಾಲಂಕಾರ, ಪುರಸಭೆಯಿಂದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಹನೀಯರ ಪುತ್ಥಳಿ, ವೃತ್ತ ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು.
ಬೆಳಗ್ಗೆ 7ಕ್ಕೆ ಇಲಾಖೆ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ, ನಂತರ 8 ಗಂಟೆಗೆ ತಾಲೂಕು ಆಡಳಿತ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿ ಚಟುವಟಿಕೆ ಆಯೋಜಿಸಲು ಶಿಕ್ಷಣ ಇಲಾಖೆ ಮುಂದಾಗಬೇಕು ಎಂದರು.
ವೇದಿಕೆಯಲ್ಲಿ ಸ್ವಚ್ಛತೆ, ಕುಡಿವ ನೀರು, ನೆರಳಿನ ವ್ಯವಸ್ಥೆ ಪುರಸಭೆಯಿಂದ ಕೈಗೊಳ್ಳಬೇಕು. ಅಂದು ವಿದ್ಯುತ್ ಸಮಸ್ಯೆಯಾಗದಂತೆ ಜೆಸ್ಕಾಂ ಕ್ರಮವಹಿಸಬೇಕು. ಪ್ರತಿಯೊಬ್ಬರೂ ಕಾರ್ಯಕ್ರಮ ಯಶಸ್ಸಿಗೆ ಸಹಕಾರ ನೀಡಬೇಕು. ನಿರ್ಲಕ್ಷೃ ಮಾಡಿದರೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.
ತಾಪಂ ಇಒ ಬಸವರಾಜ ಹಟ್ಟಿ, ಪಿಐ ಎಸ್.ಮಂಜುನಾಥ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ, ಸಮಾಜ ಕಲ್ಯಾಣಾಧಿಕಾರಿ ರಾಜ್‌ಕುಮಾರ್, ಜೆಸ್ಕಾಂ ಎಇಇ ವೆಂಕಟೇಶ ಚಿಲ್ಕರಾಗಿ, ಶಿರಸ್ತೇದಾರ್ ಭೀಮರಾಯ ಮೇಟಿ, ಸಂಘಟನೆ ಮುಖಂಡರಾದ ಎಚ್.ಶಿವರಾಜ, ರಂಗನಾಥ ಇತರರಿದ್ದರು.