ಸಿರವಾರ: ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ರಾಯಚೂರಿನ ಬಂದೇನವಾಜ್ ಬಡಾವಣೆ ನಿವಾಸಿಗಳಾದ ಮುರ್ತುಜಾ ಹಾಗೂ ಪಾಷಾ ಬಂಧಿತರು. ಕಲ್ಲೂರು ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ಪೆಟ್ರೋಲ್ ಹಾಕಿಸಿಕೊಂಡು ನಕಲಿ ನೋಟು ಚಲಾವಣೆಗೆ ಮುಂದಾಗಿದ್ದರು.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 4,100 ರೂ. ಮೌಲ್ಯದ ನಕಲಿ ನೋಟುಗಳು ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್‌ಐ ಚಂದ್ರಶೇಖರ ಹಿರೇಮಠ ತಿಳಿಸಿದ್ದಾರೆ.