ಪಟ್ಟಣದ ವಿವಿಧ ಅಂಗಡಿ ಮುಂಗಟ್ಟುಗಳಿಗೆ ತಾಲೂಕು ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ಶುಕ್ರವಾರ ಅನಿರೀಕ್ಷಿತವಾಗಿ ಭೇಟಿ ನೀಡಿದರು. ತಾಲೂಕ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ,,ಶಿಕ್ಷಣ ಇಲಾಖೆಯ ಸಿಆರ್‌ಪಿ ರಾಮಸ್ವಾಮಿ ಇದ್ದರು.
ತಾಲೂಕು ಬಾಲ ಕಾರ್ಮಿಕ ಇಲಾಖೆ ಅದಿಕಾರಿಗಳಿಂದ ಪಟ್ಟಣದ ವಿವಿಧ ಅಂಗಡಿ ಮುಂಗಟ್ಟುಗಳಿಗೆ ಶುಕ್ರವಾರ ಅನಿರೀಕ್ಷಿತವಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ತಾಲೂಕ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಮಾತನಾಡಿ, ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ
ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಸೂಚಿಸಿದರು.