ಅವೈಜ್ಞಾನಿಕವಾಗಿ ಚೆಕ್‌ಡ್ಯಾಂಗಳ ನಿರ್ಮಾಣ

ಮಾನ್ವಿ ಪಟ್ಟಣದ ತಾಪಂ ಅವರಣದಲ್ಲಿ ಸೋಮವಾರ  ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು.
ಮಾನ್ವಿ ಪಟ್ಟಣದ ತಾಪಂ ಅವರಣದಲ್ಲಿ ಸೋಮವಾರ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು.
Published on
ಮಾನ್ವಿ: ಚೆಕ್ ಡ್ಯಾಂಗಳ ನಿರ್ಮಾಣ ವೈಜ್ಞಾನಿಕವಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ ಜಿಲ್ಲಾ ಸಮಿತಿ ಹಾಗೂ ರಾಜ್ಯ ಸುರಕ್ಷಾ ಶ್ರಮಿಕ ವರ್ಗ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತರ ಕಾರ್ಮಿಕ ಸಂಘ ಸೇರಿ ವಿವಿಧ ಸಂಘಟನೆಗಳಿಂದ ಪಟ್ಟಣದ ತಾಪಂ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. 
ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ನಕ್ಕುಂದಿ ಮಾತನಾಡಿ, ಮಾನ್ವಿ ಮತ್ತು ಸಿರವಾರ ತಾಲೂಕುಗಳಲ್ಲಿ 80ಕ್ಕೂ ಹೆಚ್ಚು ಚೆಕ್‌ಡ್ಯಾಂಗಳನ್ನು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅತ್ಯಂತ ಅವೈಜ್ಞಾನಿಕವಾಗಿ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರ ಅಂತರ್ಜಲಮಟ್ಟವ ವೃದ್ಧಿಸುವುದು, ರೈತರ ಜಮೀನುಗಳಿಗೆ ನೀರು ಹರಿಸುವುದಕ್ಕೆ ಅಗತ್ಯ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ವಿವಿಧ ಗ್ರಾಮಗಳಲ್ಲಿ ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡುವ ಕಾಮಗಾರಿ ಕೈಗೊಂಡಿದೆ ಎಂದರು.
ನಿಯಮದಂತೆ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ದಲಿತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದಕ್ಕಾಗಿ ಎಸ್ಸಿ-ಎಸ್ಟಿ ಸಮುದಾಯಗಳ ರೈತರ ಜಮೀನಿರುವ ಕಡೆ ಚೆಕ್ ಡ್ಯಾಂಗಳನ್ನು ನಿರ್ಮಿಸದೆ ಸಾಮಾನ್ಯ ರೈತರು ಇರುವ ಕಡೆ ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಗಿದೆ, ಇದರಿಂದ ಬಡ ರೈತರಿಗೆ ಅನ್ಯಾಯವಾಗಿದೆ. ಚೆಕ್ ಡ್ಯಾಂಗಳ ನಿರ್ಮಾಣದಲ್ಲಿ ನಡೆದಿರುವ ಅವ್ಯವಹಾರ ಕುರಿತು ಸಂಪೂರ್ಣವಾಗಿ ತನಿಖೆಗೆ ಒಳಪಡಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಮಿಕ ಸಂಘದ ಅಧ್ಯಕ್ಷ ಪರಶುರಾಮ ಬಾಗಲವಾಡ, ದಲಿತ ಚಳವಳಿ ತಾಲೂಕು ಅಧ್ಯಕ್ಷ ಚಂದ್ರಶೇಖರ ನಾಯಕ, ದಲಿತ ಸಮರ ಸೇನೆ ತಾಲೂಕು ಅಧ್ಯಕ್ಷ ಅನಿಲ್ ಕುಮಾರ, ದಸಂಸ ಜಿಲ್ಲಾ ಕಾರ್ಯದರ್ಶಿ ನರಸರೆಡ್ಡಿ, ಪ್ರಶಾಂತ್ ಜಾಗೀರ್ ಪನ್ನೂರ್ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net