ಪ್ರತಿ ಮಗುವಿಗೆ ತಪ್ಪದೆ ಲಸಿಕೆ ಹಾಕಿಸಿ

ಟಿಎಚ್‌ಒ ಬನದೇಶ್ವರ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ, ಜೆಸ್ಕಾಂ ಸಹಾಯಕ ಇಂಜಿನಿಯರ್ ವೆಂಕಟೇಶ ಚಿಲ್ಕರಾಗಿ ಇದ್ದರು.
ಟಿಎಚ್‌ಒ ಬನದೇಶ್ವರ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ, ಜೆಸ್ಕಾಂ ಸಹಾಯಕ ಇಂಜಿನಿಯರ್ ವೆಂಕಟೇಶ ಚಿಲ್ಕರಾಗಿ ಇದ್ದರು.
Published on
ದೇವದುರ್ಗ: ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು. ಅಭಿಯಾನ ಶೇ.100 ಪ್ರಗತಿ ಸಾಧಿಸಲು ಆರೋಗ್ಯ ಇಲಾಖೆ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಹೇಳಿದರು. 
ಪಟ್ಟಣದ ತಾಲೂಕು ಆಡಳಿತಸೌಧ ಸಭಾಂಗಣದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಶುಕ್ರವಾರ ಮಾತನಾಡಿದರು.
ಜೂ.28ರಿಂದ ಜು.1ರವರೆಗೆ ಅಭಿಯಾನ ನಡೆಯಲಿದ್ದು, ತಾಲೂಕಿನ ಪ್ರತಿ ಹಳ್ಳಿ, ದೊಡ್ಡಿ, ತಾಂಡಾಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಶಿಬಿರ ನಡೆಸಬೇಕು. ಅಲ್ಲಿ ಯಾವುದೇ ಮಗು ಹೊರಗುಳಿಯದಂತೆ ಲಸಿಕೆ ಹಾಕಿಸಬೇಕು. ಪ್ರತಿ ಗ್ರಾಪಂ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಡಂಗೂರ ಸಾರಬೇಕು. 
ಪುರಸಭೆಯಿಂದ ಕಸದ ವಿಲೇವಾರಿ ವಾಹನದ ಮೂಲಕ ವ್ಯಾಪಕ ಪ್ರಚಾರ ಮಾಡಬೇಕು. ಅಲ್ಲದೆ ಶಾಲಾ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ಪೋಲಿಯೋ ಲಸಿಕೆ ಬಗ್ಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಕೈಗೊಳ್ಳಬೇಕು ಎಂದು ಸೂಚಿಸಿದರು. 
ಟಿಎಚ್‌ಒ ಬನದೇಶ್ವರ ಮಾತನಾಡಿ, ಲಸಿಕೆಗಳ ಗುಣಮಟ್ಟವನ್ನು ಕಾಪಾಡಲು ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಜೆಸ್ಕಾಂ ನಾಲ್ಕು ದಿನಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ನಿಲ್ದಾಣದಲ್ಲಿ 10ನಿಮಿಷ ಬಸ್ ನಿಲುಗಡೆ ಮಾಡಿ ಲಸಿಕೆ ಕುರಿತು ಪ್ರಚಾರ ಮಾಡಬೇಕು. ಕಟ್ಟಡ ನಿರ್ಮಾಣಗಳಲ್ಲಿ ಕಾರ್ಮಿಕ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಕಾರ್ಮಿಕ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ಬರುವ ಮಕ್ಕಳಿಗೂ ಲಸಿಕೆ ಹಾಕಿಸಬೇಕು ಎಂದರು.
ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ, ಜೆಸ್ಕಾಂ ಸಹಾಯಕ ಇಂಜಿನಿಯರ್ ವೆಂಕಟೇಶ ಚಿಲ್ಕರಾಗಿ, ಸಹಾಯಕ ಸಿಡಿಪಿಒ ಗಂಗಮ್ಮ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net