ಅರ್ಹ ಗ್ರಾಮೀಣ ಕುಟುಂಬಕ್ಕೆ ಇನ್ನುಂದೆ 100 ದಿನಗಳ ಬದಲಾಗಿ 125 ಮಾನವ ದಿನಗಳ ಕಡ್ಡಾಯ ಉದ್ಯೋಗ ಕಲ್ಪಿಸುವ ಜೊತೆಗೆ ಗ್ರಾಮೀಣ ಪ್ರದೇಶದ ಸಮಗ್ರ ಮತ್ತು ಸ್ಯಾಚುರೇಷನ್ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಉ), ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಎಲ್ಲ ಹಂತದ ಅಧಿಕಾರಿ ಸಿಬ್ಬಂದಿಗಳಿಗೆ ಈಗಾಗಲೇ ಮಾಸ್ಟರ್ ಟ್ರೇನರ್ ಗಳಿಂದ ತರಬೇತಿಯನ್ನು ನೀಡಲಾಗಿದೆ.