ಕ್ಷಯ ನಿರ್ಮೂಲನೆಗೆ ಜಾಗ್ರತೆ ಅಗತ್ಯ

ಮಾನ್ವಿಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಶರಣಬಸವರಾಜ ಚಾಲನೆ ನೀಡಿದರು. ವೈದ್ಯಾಧಿಕಾರಿಗಳಾದ ಶ್ರೀಧರ ಇಲ್ಲೂರು, ವೀಣಾ ಇದ್ದರು.
ಮಾನ್ವಿಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಶರಣಬಸವರಾಜ ಚಾಲನೆ ನೀಡಿದರು. ವೈದ್ಯಾಧಿಕಾರಿಗಳಾದ ಶ್ರೀಧರ ಇಲ್ಲೂರು, ವೀಣಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಿರ್ಮೂಲನೆಗೆ ಜಾಗ್ರತೆ

ಕ್ಷಯ ನಿರ್ಮೂಲನೆಗೆ ಜಾಗ್ರತೆ ಅಗತ್ಯ

ಮಾನ್ವಿ: ಕ್ಷಯ ಸಾಂಕ್ರಮಿಕ ಕಾಯಿಲೆಯಾಗಿದ್ದು, ಗಾಳಿ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಆದ್ದರಿಂದ ಕ್ಷಯ ನಿರ್ಮೂಲನೆಗಾಗಿ ಮುಂಜಾಗ್ರತೆ ವಹಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಶರಣಬಸವರಾಜ ಹೇಳಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ಷಯರೋಗದ ಲಕ್ಷಣಗಳು ಕಂಡು ಬಂದರೆ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿ 6 ತಿಂಗಳ ಕಾಲ ಮಾತ್ರೆ ಸೇವಿಸಿದರೆ ಗುಣಪಡಿಸಲು ಸಾಧ್ಯ ಎಂದರು.
ರಾಯಚೂರಿನ ರಿಮ್ಸ್ ಆಸ್ಪತ್ರೆ ಮನೋರೋಗ ತಜ್ಞ ಡಾ.ಮನೋಹರ ಪತ್ತಾರ ಮಾತನಾಡಿ, ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ, ಎಚ್‌ಐವಿ ಪೀಡಿತರಲ್ಲಿ, ಅಪೌಷ್ಟಿಕತೆಯಿಂದ ಬಳಲುತ್ತಿದ್ದರೆ ಕ್ಷಯರೋಗ ಕಂಡುಬರುತ್ತದೆ. ಸಂಪೂರ್ಣ ಚಿಕಿತ್ಸೆಯಿಂದ ಗುಣಪಡಿಸಬಹುದು ಎಂದು ತಿಳಿಸಿದರು. ನಂತರ ಜಾಗೃತಿ ಜಾಥಾ ನಡೆಸಲಾಯಿತು.
ವೈದ್ಯಾಧಿಕಾರಿಗಳಾದ ಶ್ರೀಧರ ಇಲ್ಲೂರು, ವೀಣಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಬು ಚಿನ್ನು, ಕ್ಷಯರೋಗ ಮೇಲ್ವಿಚಾರಕ ಶಿವರಾಜು, ಕ್ಷಕಿರಣ ತಜ್ಞ ರಾಮು ಹೊಳಿಯಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net