ಮಹಿಳಾ ಆಯೋಗದ ಅಧ್ಯಕ್ಷರಿಂದ ವಿವಿಧೆಡೆ ಭೇಟಿ

ರಾಯಚೂರಿನ ಹೊರವಲಯದ ನಗರದ ಹೊರವಲಯದ ಸಿದ್ರಾಂಪುರದಲ್ಲಿ  ನಿರ್ಮಾಣಗೊಂಡಿರುವ  ಸರ್ಕಾರಿ ಮಾದರಿ ಪದವಿ ಕಾಲೇಜು ಕಟ್ಟಡಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಶುಕ್ರವಾರ ಭೇಟಿ ನೀಡಿದರು. ಕೆಕೆಆರ್‌ಟಿಸಿ ಜಿಲ್ಲಾ ನಿಯಂತ್ರಣಾಧಿಕಾರಿ ಇಮಾಮ್ ಸಾಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ,  ನಿರೂಪಣಾಧಿಕಾರಿ ಕುಮಾರ್,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಸಿಪಿಐ ಉಮೇಶ ಕಾಂಬ್ಳೆ ಇದ್ದರು.
ರಾಯಚೂರಿನ ಹೊರವಲಯದ ನಗರದ ಹೊರವಲಯದ ಸಿದ್ರಾಂಪುರದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಮಾದರಿ ಪದವಿ ಕಾಲೇಜು ಕಟ್ಟಡಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಶುಕ್ರವಾರ ಭೇಟಿ ನೀಡಿದರು. ಕೆಕೆಆರ್‌ಟಿಸಿ ಜಿಲ್ಲಾ ನಿಯಂತ್ರಣಾಧಿಕಾರಿ ಇಮಾಮ್ ಸಾಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ನಿರೂಪಣಾಧಿಕಾರಿ ಕುಮಾರ್,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಸಿಪಿಐ ಉಮೇಶ ಕಾಂಬ್ಳೆ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೂಲಭೂತ ಸೌಲಭ್ಯ ಒದಗಿಸಲು ಒತ್ತಾಯ
ರಾಯಚೂರು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಶುಕ್ರವಾರ ನಗರದ ವಿವಿಧೆಡೆ ಮಿಂಚಿನ ಸಂಚಾರ ಮಾಡಿ ಸ್ಥಿತಿಗತಿ ಪರಿಶೀಲನೆ ಮಾಡಿದರು.
ಮೊದಲಿಗೆ ನಗರದ ಹೊರವಲಯದ ಸಿದ್ರಾಂಪುರದಲ್ಲಿ 12 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಮಾದರಿ ಪದವಿ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕಟ್ಟಡದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಯಾವುದೇ ಕಾಮಗಾರಿ ಪ್ರಾರಂಭಿಸುವ ಮುಂಚೆ ಬೋರವೆಲ್ ಹಾಕಿಸುವ ಪದ್ದತಿ ಇದೆ. ಆದರೆ ರಾಯಚೂರಿನ ಸಿದ್ರಾಂಪುರ ಕಟ್ಟಡ ಪೂರ್ಣಗೊಂಡಿದ್ದರು. ನೀರು ಸೌಲಭ್ಯವಿಲ್ಲ. ದೊಡ್ಡ ಕಟ್ಟಡವಿದ್ದು, ಹೊರಗಿನಿಂದ ನೀರು ತರುವುದು ಸೂಕ್ತವೆ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಪ್ರಶ್ನಿಸಿದರು.
ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಭಾಗದಿಂದ ನಗರ್ ಪ್ರದೇಶಕ್ಕೆ ಹೆಣ್ಣುಮಕ್ಕಳನ್ನು ಶಿಕ್ಷಣಕ್ಕಾಗಿ ಕಳಿಸುವುದು ಕಡಿಮೆ. ಸರ್ಕಾರದ ಅನುದಾನ ಮಹಿಳೆಯರಿಗೆ ಸದುಪಯೋಗ ಆಗಬೇಕು. ರಾಯಚೂರಿಗೆ ಬರುವ ಪ್ರತಿಬಾರಿ ನೀರಿನ ಸಮಸ್ಯೆದೆ ದೂರುಗಳು ಬರುತ್ತವೆ. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದರು.
ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಸತಿ ನಿಲಯಕ್ಕೆ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕೆಂದು ಸೂಚಿಸಿದರು.
ಕೇಂದ್ರೀಯ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ನಿಲ್ದಾಣದಲ್ಲಿ ಇರಸಲಾಗಿರುವ ಸಿಸಿಟಿವಿಗಳನ್ನು ಪರಿಶೀಲಿಸಿ, ನಿಲ್ದಾಣ ಆವರಣದಲ್ಲಿ ಮಕ್ಕಳ ಸಹಾಯವಾಣಿ, ಮಹಿಳಾ ಸಹಾಯವಾಣಿ ಸೇರಿದಂತೆ ಇತರೆ ಸಹಾಯವಾಣಿಗಳ ಫಲಕಗಳನ್ನು ಅಳವಡಿಸಬೇಕು. ನಿಲ್ದಾಣದಲ್ಲಿ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು
ನಂತರ ಮಹಿಳೆಯರ ನಿರೀಕ್ಷಣಾ ಕೊಠಡಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯವನ್ನು ಪರಿಶೀಲನೆ ಮಾಡಿದರು.
ನಂತರ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಸ್ವಚ್ಚತೆ, ರೋಗಿಗಳ ಸಮಸ್ಯೆ ಸೇರಿ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿ ಮಾನ್ವಿ ತಾಲೂಕಿನ ರಾಜೋಳಿಯ ಹನುಮಂತಿ ಗಂಡ ದೇವರಾಜ ದಂಪತಿಗಳ ಹೆಣ್ಣು ಮಗುವಿಗೆ ನಾಗಲಕ್ಷ್ಮೀ ಎಂದು ಮಗುವಿಗೆ ನಾಮಕರಣ ಮಾಡಿದರು.
ಈ ಸಂದರ್ಭದಲ್ಲಿ ಕೆಕೆಆರ್‌ಟಿಸಿ ಜಿಲ್ಲಾ ನಿಯಂತ್ರಣಾಧಿಕಾರಿ ಇಮಾಮ್ ಸಾಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ನಿರೂಪಣಾಧಿಕಾರಿ ಕುಮಾರ್,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಸಿಪಿಐ ಉಮೇಶ ಕಾಂಬ್ಳೆ ಸೇರಿ ಅನೇಕರು ಇದ್ದರು.


ಶಿಕ್ಷಣ, ವಿದ್ಯಾರ್ಥಿ ವಸತಿ ನಿಲಯ ಮತ್ತು ಮೂಲಸೌಕರ್ಯಗಳ ಕುರಿತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ನಮ್ಮ ಭಾಗದಲ್ಲಿ ಕಾಲೇಜುಗಳಿದ್ದರೂ, ಮೂಲಭೂತ ಸೌಲಭ್ಯಗಳಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ನಾನು ಮಾಡುತ್ತೇನೆ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಲ್ಲಿ ಒಂದು ಉತ್ತಮ ಐಎಎಸ್ ತರಬೇತಿ ಕೇಂದ್ರ. ಕಲಬುರಗಿಯಲ್ಲಿ ಸಾಧ್ಯವಾಗಿರುವಂತಹ ಐಎಎಸ್ ಕೋಚಿಂಗ್ ಕೇಂದ್ರವನ್ನು ರಾಯಚೂರಿನಲ್ಲೂ ಸ್ಥಾಪಿಸಬೇಕು ಎಂಬುದು ನಮ್ಮ ಆಶಯ. ಇದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ಡಾ.ನಾಗಲಕ್ಷ್ಮೀ ಚೌಧರಿ- ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net