ಹೆಲ್ಮೆಟ್ ಕಡ್ಡಾಯ ಧರಿಸಿ

ಲಿಂಗಸುಗೂರಿನಲ್ಲಿ ಸಾರಿಗೆ ಸುರಕ್ಷಾ ಜಾಥಾ ಕಾರ್ಯಕ್ರಮದಲ್ಲಿ ಪೊಲೀಸ್ ಇನ್‌ಸ್ಟೆಕ್ಟರ್ ಹೊಸಕೇರಪ್ಪ ಮಾತನಾಡಿದರು.
ಲಿಂಗಸುಗೂರಿನಲ್ಲಿ ಸಾರಿಗೆ ಸುರಕ್ಷಾ ಜಾಥಾ ಕಾರ್ಯಕ್ರಮದಲ್ಲಿ ಪೊಲೀಸ್ ಇನ್‌ಸ್ಟೆಕ್ಟರ್ ಹೊಸಕೇರಪ್ಪ ಮಾತನಾಡಿದರು.
Published on

ಲಿಂಗಸುಗೂರು: ಅಪ್ರಾಪ್ತರಿಗೆ ವಾಹನ ಚಲಾಯಿಸಲು ನೀಡಿದರೆ ಪಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಹೊಸಕೇರಪ್ಪ ಹೇಳಿದರು.

ಪೊಲೀಸ್ ಇಲಾಖೆ ಹಾಗು ಡಾ.ಸುಧಾಮೂರ್ತಿ ಪದವಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಡಾ.ಅಂಬೇಡ್ಕರ್ ಸರ್ಕಲ್‌ನಲ್ಲಿ ಆಯೋಜಿಸಿದ್ದ ಸಾರಿಗೆ ಸುರಕ್ಷಾ ಜಾಥಾ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ಮೂಲಕ ಅಪಘಾತವಾದಾಗ ಜೀವ ಹಾನಿಯಾಗುವುದನ್ನು ತಪ್ಪಿಸಿಕೊಳ್ಳಬೇಕು. ವಾಹನ ಚಲಾಯಿಸುವಾಗ ವಿಮೆ ದಾಖಲೆ ಹಾಗೂ ವಾಹನ ಚಾಲನಾ ಪರವಾನಗಿ ಹೊಂದಿರಬೇಕೆಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net