ಪೊಲೀಸ್ ಇಲಾಖೆಯಿಂದ ಮಹಿಳಾ ದಿನಾಚರಣೆ

ರಾಯಚೂರಿನ ಜಿಲ್ಲಾ ಪೊಲೀಸ್ ಕವಾಯತ್ತು ಮೈದಾನದಲ್ಲಿ ಭಾನುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಎಸ್ಪಿ ಅರುಣಾಂಗ್ಶು ಗಿರಿ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಕವಾಯತ್ತು ನಡೆಯಿತು.
ರಾಯಚೂರಿನ ಜಿಲ್ಲಾ ಪೊಲೀಸ್ ಕವಾಯತ್ತು ಮೈದಾನದಲ್ಲಿ ಭಾನುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಎಸ್ಪಿ ಅರುಣಾಂಗ್ಶು ಗಿರಿ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಕವಾಯತ್ತು ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಮಹಿಳಾ ಪೊಲೀಸರಿಂದ ಕವಾಯತು ಪ್ರದರ್ಶನ
  • ಉತ್ತಮ ಕವಯತ್ತು ಮಾಡಿದವರಿಗೆ ಗೌರವ
  • ಮೊದಲ ಬಾರಿಗೆ ಜಿಲ್ಲೆಯಲ್ಲಿ ಆಚರಣೆ

ರಾಯಚೂರು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಶೇ.15ರಷ್ಟು ಮಹಿಳಾ ಪೊಲೀಸರು ಕಾರ್ಯನಿ ರ್ವಹಿಸುತ್ತಿದ್ದು, ವಿವಿಧ ಠಾಣೆಯಲ್ಲಿ ಮಹಿಳಾ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಮಹಿಳೆಯರ ರಕ್ಷಣೆ ಮತ್ತು ಮಹಿಳೆಯರ ಮೇಲಾಗುವ ದವರ್ಜನ್ಯವನ್ನು ತಡೆಗಟ್ಟು ಶ್ರಮ ವಹಿಸುತ್ತಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶುಗಿರಿ ಹೇಳಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಮಹಿಳಾ ಪೊಲೀಸರ ಕವಾಯತು ಕಾರ್ಯಕ್ರಮವನ್ನು ಉದ್ದೇಶಿಸಿ

ಮಾತನಾಡಿದರು.

ಮಹಿಳಾ ಪೊಲೀಸರು ತಮ್ಮ ಕುಟುಂಬದ ನಿರ್ವಹಣೆ ಮತ್ತು ಜವಾಬ್ದಾರಿ ಜತೆಗೆ ಇಲಾಖೆಯಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಅವರ ಕಾರ್ಯ ಪ್ರಶಂಸ ನೀಯವಾದದ್ದು, ಪೊಲೀಸ್ ಇಲಾಖೆಗೆ ಮಹಿಳಾ ಪೊಲೀಸರ ಕೊಡುಗೆ ಅಪಾರವಾಗಿದೆ. ಪ್ರತಿ ಮಹಿಳಾ ಪೊಲೀಸ್ ಅಧಿಕಾರಿಗಳಾಗಲಿ ಅಥವಾ ಸಿಬ್ಬಂದಿಗಳಾಗಲಿ ವೈಯಕ್ತಿಕವಾಗಿ ಇಲಾಖೆಯ ಕೆಲಸಗಳಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅವರನ್ನು ಅಭಿನಂದಿಸುವ ನಿಟ್ಟಿನಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಪೊಲೀಸರಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಈ ಕವಾಯತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗಳಿಂದ ಕವಾಯತು ಪ್ರದರ್ಶಿಸಲಾಯಿತು.

ಉತ್ತಮ ಕಾರ್ಯ ನಿರ್ವಹಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿವೈಎಸ್ಪಿಗಳಾದ ಶಾಂತವೀರ , ಪ್ರಮಾನಂದ ಘೋಡೈ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net