ಜನಗಣತಿ ಯಶಸ್ಸಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ

ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಜನಗಣತಿ ತರಬೇತಿ ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿದರು.
ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಜನಗಣತಿ ತರಬೇತಿ ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿದರು.
Published on
ಸಿರವಾರ: ಜನಗಣತಿ ಸಮೀಕ್ಷೆಗೆ ನಿಯೋಜನೆಗೊಂಡಿರುವ ಶಿಕ್ಷಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಜನಗಣತಿ ಸಮೀಕ್ಷೆ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಶುಕ್ರವಾರ ಮಾತನಾಡಿದರು. 
ಜನಗಣತಿ ಹಾಗೂ ಮನೆಗಣತಿ ಮಾಹಿತಿ ಗೌಪ್ಯವಾಗಿ ಇಡಲಾಗುತ್ತಿದ್ದು, ಇದು ದೇಶದ ಸಮಗ್ರ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ. ಸಮೀಕ್ಷೆ ವೇಳೆ ವೈಯಕ್ತಿಕ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂದರು.  
ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ ಮಾತನಾಡಿ, ನಿರ್ಲಕ್ಷೃವಹಿಸದೇ ಕೈಪಿಡಿ ಓದಿ, ತರಬೇತಿಯನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡರೆ ಸಮೀಕ್ಷೆ ವೇಳೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದರು. ತಹಸೀಲ್ದಾರ್ ಅಶೋಕ ಪವಾರ್, ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ, ನೌಕರರ ಸಂಘದ ಅಧ್ಯಕ್ಷ ಆರೀಫ್ ಮಿಯ್ಯ ಚಾಗಬಾವಿ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net