ಜಿಲ್ಲೆಯ ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿನಿಲಯ ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ಗುರುವಾರ ರಾಯಚೂರಿನ ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಮಹೇಶ್ ಚೀಕಲಪರ್ವಿ,ಕಾರ್ಯದರ್ಶಿ ಗಾಯತ್ರಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ ಶಿರಿಶ್ಯಾಡ್,ಬಸವರಾಜ, ಶಶಿಕುಮಾರ,ಮಹೇಶ್ವರಿ, ಹನುಮಂತ, ಶ್ರೀದೇವಿ, ಶ್ರೀನಿವಾಸ ಇದ್ದರು.
Published on:
Copied
Follow Us
ರಾಯಚೂರು
ಜಿಲ್ಲೆಯ ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿನಿಲಯ ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ಗುರುವಾರ ನಗರದ ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೇರಿ ವಿವಿಧ ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಬಾಕಿ ಇರುವ ಏಪ್ರಿಲ್ ಮತ್ತು ಮೇ ತಿಂಗಳ ವೇತನ ವನ್ನು ತಕ್ಷಣವೇ ಬಿಡುಗಡೆ ಮಾಡಬೇಕು.
2025ರಿಂದ ಕಾರ್ಮಿಕರಿಗೆ ನೀಡಬೇಕಾಗಿರುವ ವೇರಿಯಬಲ್ ಡಿಯರ್ನೆಸ್ ಅಲೌನ್ಸ್ ಹೆಚ್ಚಳವನ್ನು ಅರಿಯರ್ಸ್ ರೂಪದಲ್ಲಿ ಪಾವತಿಸಬೇಕು. ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳಲ್ಲಿ ಕಾರ್ಮಿಕರ ಹಾಜರಾತಿ ಕಡಿತಗೊಳಿಸಿ ವೇತನ ಕಡಿತ ಮಾಡುವ ಕ್ರಮವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ವಿವರಿಸಿದರು.
ಕಾರ್ಮಿಕರ ವೇತನದಲ್ಲಿ ಕಾನೂನುಬಾಹಿರವಾಗಿ ಕಡಿತ ಮಾಡುತ್ತಿರುವ ಶಾರ್ಪ್‌ವಾಚ್ ಹಾಗೂ ಎಆರ್‌ಸಿ ಏಜೆನ್ಸಿ ವಿರುದ್ಧ ಸೂಕ್ತ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಹೇಶ್ ಚೀಕಲಪರ್ವಿ,ಕಾರ್ಯದರ್ಶಿ ಗಾಯತ್ರಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ ಶಿರಿಶ್ಯಾಡ್,ಬಸವರಾಜ, ಶಶಿಕುಮಾರ,ಮಹೇಶ್ವರಿ, ಹನುಮಂತ, ಶ್ರೀದೇವಿ, ಶ್ರೀನಿವಾಸ ಸೇರಿ ಅನೇಕರು ಇದ್ದರು.