ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳಿಬ್ಬರು ಶವವಾಗಿ ಪತ್ತೆ..!

Children
Published on

ರಾಯಚೂರು: ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳಿಬ್ಬರು ಸೋಮವಾರ ಬೆಳಗ್ಗೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಾನ್ವಿ ತಾಲೂಕಿನ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ಮಧ್ಯಾಹ್ನ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತ ಮಕ್ಕಳನ್ನು ವರುಣ್ (9) ಹಾಗೂ ಸಣ್ಣಯ್ಯ (5) ಎಂದು ಗುರುತಿಸಲಾಗಿದೆ. ಆಟವಾಡಲು ಹೋದಾಗ ಇಬ್ಬರು ನಾಪತ್ತೆಯಾಗಿದ್ದರು. ನಿನ್ನೆಯಿಂದ ಸಿರವಾರ ಹಾಗೂ ಕವಿತಾಳ ಪೋಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಆದರೆ, ನಿನ್ನೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಇಂದು ಸಹ ಶೋಧ ಕಾರ್ಯ ಮುಂದುವರಿಸಿದಾಗ ಬಾಲಕರಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳ ಸಾವಿನ ಸುದ್ದಿ ಕೇಳಿದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಸಿರವಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net