ಅಂಗಡಿ, ಹೋಟೆಲ್‌ಗಳ ಮೇಲೆ ದಾಳಿ

Sandur Raid
ಸಂಡೂರು ತಾಲೂಕು ವಿಜಯ ಸರ್ಕಲ್ ಬಳಿ ಹೋಟೆಲ್‌ವೊಂದರಲ್ಲಿ ತಹಸೀಲ್ದಾರ್ ಅನಿಲ್ ಕುಮಾರ್ ನೇತೃತ್ವದ ತಂಡ ಪರಿಶೀಲಿಸಿತು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಣಾಧಿಕಾರಿ ಮೌನೇಶಿ, ಕಾರ್ಮಿಕ ನಿರೀಕ್ಷಕ ಮಂಜುನಾಥ ತೊಂಡಿಹಾಳ್, ಪುರಸಭೆ ಮುಖ್ಯಾಧಿಕಾರಿ ಕೆ.ಜಯಣ್ಣ ಇದ್ದರು.
Published on

ಸಂಡೂರು: ಪಟ್ಟಣದ ವಿವಿಧ ಅಂಗಡಿ, ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ಅನಿಲ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, 3400 ರೂ. ದಂಡ ವಿಧಿಸಿದೆ.

ಅಂಗಡಿ, ಹೊಟೇಲ್‌ಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು, ಪ್ಲಾಸ್ಟಿಕ್, ತಂಬಾಕು ಮಾರಾಟ ಮಾಡುವವರಿಗೆ ದಂಡ ವಿಧಿಸಲಾಯಿತು.

ಜಿಲ್ಲಾ ಮಕ್ಕಳ ಘಟಕ ರಕ್ಷಣಾಧಿಕಾರಿ ಮೌನೇಶಿ, ಕಾರ್ಮಿಕ ನಿರೀಕ್ಷಕ ಮಂಜುನಾಥ ತೊಂಡಿಹಾಳ್, ಪುರಸಭೆ ಮುಖ್ಯಾಧಿಕಾರಿ ಕೆ.ಜಯಣ್ಣ, ತಾಲೂಕು ಪಿಪಿಇಒ ಪ್ರಭುದೇವಯ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಮಲ್ಲೇಶಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಹೊನ್ನೂರಸ್ವಾಮಿ, ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಎಂ.ಎಂ.ಭಜಂತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net