

ಹುಬ್ಬಳ್ಳಿ : ಗುಂಟೂರು ವಿಭಾಗದಲ್ಲಿ ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಈ ಮಾರ್ಗದ ವಿವಿಧ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಅ. 2 ರಿಂದ 8ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ- ವಿಜಯವಾಡ ಡೈಲಿ ಎಕ್ಸ್ಪ್ರೆಸ್, ಅ. 3 ರಿಂದ 9ರವರೆಗೆ ವಿಜಯವಾಡ - ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.