

ಹುಬ್ಬಳ್ಳಿ : ನೈಋತ್ಯ ರೈಲ್ವೆ ವಲಯವು ವಿವಿಧ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳವರೆಗೆ ವಿಸ್ತರಿಸಿದೆ.
ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಪ್ರತಿ ಶನಿವಾರ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಜುಲೈ 1 ರಿಂದ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 24 ರವರೆಗೆ ಈ ರೈಲು ಸಂಚರಿಸಲು ಸೂಚಿಸಲಾಗಿತ್ತು.
ರಾಮೇಶ್ವರಂ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಪ್ರತಿ ಭಾನುವಾರ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಜುಲೈ 2 ರಿಂದ ಅಕೊ್ಟೕಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 25 ರವರೆಗೆ ಓಡಿಸಲು ಸೂಚಿಸಲಾಗಿತ್ತು.
ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ನಿತ್ಯ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಜುಲೈ 1 ರಿಂದ ಆಗಸ್ಟ್ 31 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂ. 30 ರವರೆಗೆ ಈ ರೈಲು ಸಂಚರಿಸಲು ಸೂಚಿಸಲಾಗಿತ್ತು.
ಮಂಗಳೂರು ಜಂಕ್ಷನ್ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ನಿತ್ಯ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಜುಲೈ 2 ರಿಂದ ಸೆಪ್ಟೆಂಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜು. 1 ರವರೆಗೆ ಈ ರೈಲು ಸಂಚರಿಸಲು ಸೂಚಿಸಲಾಗಿತ್ತು ಎಂದು ರೈಲ್ವೆ ವಲಯದ ಪ್ರಕಟಣೆ ತಿಳಿಸಿದೆ.