" ರೈಲ್ವೆ ಎಕ್ಸಾಂನಲ್ಲಿ ಮಾಂಗಲ್ಯ, ಜನಿವಾರ ಧರಿಸಲು ಅನುಮತಿ "

Somanna
Published on

ತುಮಕೂರು: ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ರೈಲ್ವೆ ಇಲಾಖೆ‌ ನೇಮಕಾತಿ ಪರೀಕ್ಷೆ ಬರೆಯಲು ಅಭ್ಯರ್ಥಿಗಳಿಗೆ ತೊಂದರೆ ನೀಡದಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಏ. 28, 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದ್ದು ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ಬಂದ‌ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಎಂದರು.

ಈ ಬಗ್ಗೆ, ಸಂಸದರು, ಶಾಸಕರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಸಚಿವರು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net