ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ

Manju Frotest
Published on

ಬೆಳಗಾವಿ: ತಾಲೂಕಿನ ಸುಳೇಭಾವಿ ರೈಲ್ವೆ ಮೇಲ್ಸೇತುವೆ ನಿರ್ಮಾಣ, ಕೃಷಿ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡುವಂತೆ ಆಗ್ರಹಿಸಿ ಸೋಮವಾರ ನಗರದ ರೈಲ್ವೆ ಇಲಾಖೆ ಕಚೇರಿ ಮುಂಭಾಗದಲ್ಲಿ ಸುಳೇಭಾವಿ ಗ್ರಾಮಸ್ಥರು, ಕರ್ನಾಟಕ ಯುವ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ ಮೀಸಲಿಟ್ಟಿದ್ದ ದಾರಿಯನ್ನು ರೈಲ್ವೆ ಇಲಾಖೆ ಅಧಿಕಾರಿಗಳು ಕಾಂಪೌಂಡ್ ಕಟ್ಟಿ ದಾರಿ ಬಂದ್ ಮಾಡಿದ್ದಾರೆ. ಇದರಿಂದಾಗಿ ನಿತ್ಯ ಕೃಷಿ ಜಮೀನುಗಳಿಗೆ ರೈತರು ಹೋಗಲು ಸಮಸ್ಯೆ ಎದುರಿಸುತ್ತಿದ್ದು, ದಾರಿ ಮಾಡಿಕೊಡುವಂತೆ ಮೇಲಿಂದ ಮೇಲೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ರೈಲ್ವೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು. ಬಳಿಕ ರೈಲ್ವೆ ಇಲಾಖೆ ಅಧಿಕಾರಿಗಳು ಸಮಸ್ಯೆ ಇತ್ಯರ್ಥ ಪಡಿಸುವ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟರು.

ಕರ್ನಾಟಕ ಯುವ ರಕ್ಷಣಾ ವೇದಿಕೆ ಸುನೀಲ ಎಂ.ಎಸ್., ಉಪಾಧ್ಯಕ್ಷ ಮಹಾಂತೇಶ ಕೂಲಿನವರ, ಕಿತ್ತೂರು ತಾಲೂಕು ಅಧ್ಯಕ್ಷ ಬಾಬು ಪಾಟೀಲ, ವಿನಾಯಕ ಬಂಗೆನ್ನವರ, ಬಸಯ್ಯ ಹಿರೇಮಠ, ಬಾಬು ಬಡಕಿ, ಶಿವರಾಯ ತಳವಾರ, ಮಹಾಂತೇಶ ಕೂಲಿನವರ, ಶಿವಾನಂದ ಅಂಕಲಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net