

ಹಗರಿಬೊಮ್ಮನಹಳ್ಳಿ: ತುಮಕೂರು ಜಿಲ್ಲೆಯ ಗಿಡದ ಮುದ್ದೇನಹಳ್ಳಿಯಲ್ಲಿ ರೈಲ್ವೆ ಪೋಲಿಸ್ ದಲಿತ ಯುವಕನ ಮೇಲೆ ನಡೆಸಿರುವ ಹಲ್ಲೆಯನ್ನು ಖಂಡಿಸುವುದಾಗಿ ಕರ್ನಾಟಕ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಮಾಳಮ್ಮ ಹೇಳಿದರು.
ಇದನ್ನೂ ಓದಿ: ದಲಿತ ನಾಯಕರನ್ನು ಮುಗಿಸುವುದು ಬಿಜೆಪಿ ಅಜೆಂಡಾ
ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು. ಚಂದ್ರಶೇಖರ ಎನ್ನುವ ರೈಲ್ವೆ ಪೊಲೀಸ್ ಕಾನ್‌ಸ್ಟೇಬಲ್ ದಲಿತ ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸುವ ಮೂಲಕ ಜಾತಿ ತಾರತಮ್ಯ ಹಾಗೂ ದೌರ್ಜನ್ಯ ಎಸಗಿದ್ದು, ದೌರ್ಜನ್ಯ ತಡೆ ಕಾಯ್ದೆಯನ್ವಯ ಬಂಧಿಸಿ, ಸೇವೆಯಿಂದ ವಜಾ ಮಾಡಬೇಕು.
ಯುವಕನಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಗೌರವಾಧ್ಯಕ್ಷ ಯು.ಬಸವರಾಜ, ತಾಲೂಕು ಅಧ್ಯಕ್ಷೆ ಹುಲಿಗೆಮ್ಮ, ಮಕ್ಕಳ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಮಂಜುನಾಥ ಡಗ್ಗಿ, ಪ್ರಧಾನ ಕಾರ್ಯದರ್ಶಿ ರಮೇಶ್, ಪದಾಧಿಕಾರಿಗಳು ಇದ್ದರು.