

ಮಡಿಕೇರಿ:
ಸೋಮವಾರಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಮಂಗಳವಾರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಆಗಿದೆ. ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ 8.30ರ ತನಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಮುಂದುವರಿಸಲಾಗಿದೆ. ತಲಕಾವೇರಿ, ಭಾಗಮಂಡಲದಲ್ಲೂ ಮಳೆಯ ಅಬ್ಬರ ಇಳಿಮುಖವಾಗಿದ್ದು, ರಸ್ತೆಯ ಮೇಲೆ ಹರಿಯುತ್ತಿದ್ದ ನೀರು ಕೂಡ ಇಳಿಯುತ್ತಿದೆ. ಭಾಗಮಂಡಲ-ಮಡಿಕೇರಿ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ಸುಮಾರು ಅರ್ಧ ಅಡಿಗಳಷ್ಟು ನೀರಿದೆ.
ಮಡಿಕೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 275ರಲ್ಲಿ ಮದೆನಾಡು ಬಳಿಯ ಕರ್ತೋಜಿ ಎಂಬಲ್ಲಿ ಸೋಮವಾರ ಸಂಜೆ ಬರೆ ಕುಸಿದು ವಾಹನ ಸಂಚಾರಕ್ಕೆ ಅಡ್ಡಿ ಆಗಿತ್ತು. ರಾತ್ರಿಯೇ ಇಲ್ಲಿ ರಸ್ತೆ ಮೇಲಿನ ಮಣ್ಣು, ಮರ ತೆರವುಗೊಳಿಸಲಾಗಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ.
ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆ ಆಗಿರುವುದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ಕಡಿಮೆ ಆಗಿದೆ. ಮಂಗಳವಾರ ಮಧ್ಯಾಹ್ನದ ವೇಳೆಗೆ 14,438 ಕ್ಯೂಸೆಕ್ ನೀರಿನ ಒಳಹರಿವು ಇತ್ತು. 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. 2859 ಅಡಿ ಎತ್ತರದ ಅಣೆಕಟ್ಟೆಯಲ್ಲಿ ಪ್ರಸ್ತುತ 2852.57 ಅಡಿಗಳಷ್ಟು ನೀರಿದೆ.
ಕುಶಾಲನಗರದಲ್ಲಿ ನದಿ ತೀರದಲ್ಲಿರುವ ಬಡಾವಣೆಗಳಲ್ಲಿ ಸೋಮವಾರ ರಾತ್ರಿ ಪ್ರವಾಹದ ನೀರು ನುಗ್ಗುವ ಆತಂಕ ಕಾಣಿಸಿಕೊಂಡಿತ್ತು. ಸಾಯಿ ಬಡಾವಣೆಯ ಕೆಲವು ಭಾಗಗಳಿಗೆ ನೀರು ನುಗ್ಗಿತ್ತು. ಆದರೆ ಮಂಗಳವಾರ ಬೆಳಗ್ಗೆ ನೀರಿನ ಪ್ರಮಾಣ ಇಳಿದಿದ್ದು, ಸದ್ಯದ ಮಟ್ಟಿಗೆ ಆತಂಕ ದೂರವಾಗಿದೆ.
ಮಳೆಹಾನಿ ಪೀಡಿದ ಪ್ರದೇಶಗಳಿಗೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು