ಕೊಡಗಿನಲ್ಲಿ ಮುಂದುವರಿದ ಮಳೆ

rain
Published on

ಮಡಿಕೇರಿ:

ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ದಿನ ಪೂರ್ತಿ ಮಳೆಯ ವಾತಾವರಣ ಇತ್ತು. ಮಡಿಕೇರಿಯಲ್ಲಿ ಮಳೆ ಜತೆಗೆ ಚಳಿಯೂ ಜೋರಾಗಿತ್ತು.

ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 75.67 ಮಿ.ಮೀ. ಮಳೆಯಾಗಿದೆ. ಭಾಗಮಂಡಲ ಹೋಬಳಿಯಲ್ಲಿ ಅತೀ ಹೆಚ್ಚು ಅಂದರೆ 195 ಮಿಮೀ ಮಳೆ ದಾಖಲಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆ ಆಗಿದೆ. ಮಂಗಳವಾರ ಮಧ್ಯಾಹ್ನದ ಮಾಹಿತಿ ಪ್ರಕಾರ 10 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಇದ್ದು, 18 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ.

ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ಪ್ರವಾಹದ ನೀರು ಹರಿಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net