ಮಳೆಗೆ ಕುಸಿದ ಮನೆ ಗೋಡೆ

SRP_11-03jpj
ಶ್ರೀರಂಗಪಟ್ಟಣ ತಾಲೂಕಿನ ಕೂಡಲಕುಪ್ಪೆ ಗ್ರಾಮದಲ್ಲಿ ಸಿಡಿಲು-ಗುಡುಗು ಸಹಿತ ಸುರಿದ ಭಾರಿ ಮಳೆಯಿಂದ ಶಶಿಧರ್ ಅವರ ಮನೆಯ ಗೋಡೆ ಕುಸಿದು ಬಿದ್ದಿರುವುದು.
Published on

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಸೇರಿದಂತೆ ತಾಲೂಕಿನ ಸುತ್ತಮುತ್ತ ಕಳೆದ ಎರಡ್ಮೂರು ದಿನಗಳಿಂದ ಸಿಡಿಲು-ಗುಡುಗು ಸಹಿತ ಸುರಿದ ಕುಂಭದ್ರೋಣ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದ್ದು, ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ.

ತಾಲೂಕಿನ ಕೂಡಲಕುಪ್ಪೆ ಗ್ರಾಮದಲ್ಲಿ ಶುಕ್ರವಾರ ಮಧ್ಯ ರಾತ್ರಿ ಶಶಿಕುಮಾರ್ ಎಂಬುವರ ಮನೆಯ ಹಿಂಭಾಗದ ಗೋಡೆ ಕುಸಿದು ಬಿದ್ದು, ಧವಸ ಧಾನ್ಯಕ್ಕೆ ಹಾನಿಯುಂಟಾಗಿದೆ. ಮನೆಯವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸ್ಥಳಕ್ಕೆ ಬಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್ ಹಾಗೂ ಗ್ರಾಮ ಲೆಕ್ಕಿಗ ಸುಹಾಸ್ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದು ತಾಲೂಕು ಆಡಳಿತಕ್ಕೆ ವರದಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net