9ರಿಂದ ದಕ್ಷಿಣ ಕರ್ನಾಟಕದಲ್ಲಿ ಮತ್ತೆ ಮಳೆ:ಮುಂದಿನ 3 ದಿನ ರಾಜ್ಯದಲ್ಲಿ ಒಹಣವೆ

rain final
Published on

ಬೆಂಗಳೂರು:ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನ.9ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಉತ್ತರ ಒಳನಾಡು ಹಾಗೂ ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದೆ.

ಚಾಮರಾಜನಗರ, ಕೊಡಗು, ಚಿಕ್ಕಮಗಳೂರಿನಲ್ಲಿ ನ.9ರಂದು ಹಾಗೂ ಕೋಲಾರದಲ್ಲಿ ನ.10 ಮತ್ತು ಮೈಸೂರಿನಲ್ಲಿ ನ.11ರಂದು ಭಾರಿ ವರ್ಷಧಾರೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಮತ್ತು ಬಳ್ಳಾರಿಯಲ್ಲಿ ನ.11ರಿಂದ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ತಿಂಗಳಲ್ಲಿ ವಾಡಿಕೆಗಿಂತ ಅಧಿಕ: ಅ.1ರಿಂದ ನ.4ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಹಿಂಗಾರು ಮಳೆ ಬಿದ್ದಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 131 ಮಿಮೀ ಮಳೆಯಾಗಬೇಕಿತ್ತು. ಆದರೆ, 184 ಮಿಮೀ ಸುರಿದಿದ್ದು. ಶೇ.41ರಷ್ಟು ವಾಡಿಕೆಗಿಂತ ಹೆಚ್ಚು ಸುರಿದಿದೆ. ಗದಗ, ಯಾದಗಿರಿ, ರಾಯಚೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉತ್ತಮ ವರ್ಷಧಾರೆಯಾಗಿದೆ. ದಣ ಕರ್ನಾಟಕದಲ್ಲಿ ಶೇ.60, ಉತ್ತರ ಕರ್ನಾಟಕದಲ್ಲಿ ಶೇ.21, ಮಲೆನಾಡಲ್ಲಿ ಶೇ.51 ಹಾಗೂ ಕರಾವಳಿಯಲ್ಲಿ ಶೇ.39ರಷ್ಟು ವಾಡಿಕೆಗಿಂತ ಅಧಿಕವಾಗಿ ಮಳೆ ಸುರಿದಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net