ಹಳೇ ಮೈಸೂರಿನ 10 ಜಿಲ್ಲೆಗಳಿಗೆ ಮಳೆ ಅಲರ್ಟ್

monsoon rains
Published on

ಬೆಂಗಳೂರು: ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಅಬ್ಬರ ಇಳಿಕೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರು ಸುತ್ತಲಿರುವ ಹಳೇ ಮೈಸೂರು ಭಾಗದ 10 ಜಿಲ್ಲೆಗಳಲ್ಲಿ ಬುಧವಾರದಿಂದ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ರಾಮನಗರ, ತುಮಕೂರು, ಚಾಮರಾಜನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಬುಧವಾರದಿಂದ ಎರಡು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ಅನ್ನು ಹವಾಮಾನ ಇಲಾಖೆ ರವಾನಿಸಿದೆ. ಈ ಹಿನ್ನೆಲೆಯಲ್ಲಿ ಆಯಾ ಜಿಲ್ಲಾಡಳಿತಗಳು ಭಾರೀ ಮಳೆಯಿಂದ ಅನಾಹುತ ತಡೆಯಲು ಎಚ್ಚರ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣಕನ್ನಡ ಹಾಗೂ ಉಡುಪಿಯಲ್ಲಿ ಗುರುವಾರದಿಂದ ನಾಲ್ಕು ದಿನ ಹೆಚ್ಚು ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿ ವರ್ಷಧಾರೆ ಆಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net