ಬಾಳೆಹೊನ್ನೂರು ಸುತ್ತಮುತ್ತ ಮಳೆ

3 bhr rain damage
Published on

ಬಾಳೆಹೊನ್ನೂರು: ಬಾಳೆಹೊನ್ನೂರು ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ ಸಾಧಾರಣ ಪ್ರಮಾಣದ ಮಳೆಯಾಗಿದೆ. ಬುಧವಾರ ಮಧ್ಯಾಹ್ನ 3.30ರ ವೇಳೆಗೆ ಗುಡುಗು ಸಹಿತ ಆರಂಭಗೊಂಡ ಮಳೆ ಒಂದು ಗಂಟೆ ಸಾಧಾರಣ ಪ್ರಮಾಣದಲ್ಲಿ ಸುರಿದಿದೆ. ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ಮಳೆ ತಂಪನ್ನು ಎರೆದಿದೆ. ಬಾಳೆಹೊನ್ನೂರು ಪಟ್ಟಣ ಸೇರಿದಂತೆ ರಂಭಾಪುರಿ ಪೀಠ, ಮೆಣಸುಕೊಡಿಗೆ, ವಾಟುಕೊಡಿಗೆ, ತಲವಾನೆ, ಕುಂಬತ್ತಿ, ಅರಳೀಕೊಪ್ಪ, ಸರಗಳಲೆ, ಸೀಗೋಡು, ಇಟ್ಟಿಗೆ, ಕಡಬಗೆರೆ, ಸಂಗಮೇಶ್ವರಪೇಟೆ, ಗೋರಿಗಂಡಿ, ಮಾಗುಂಡಿ, ಬನ್ನೂರು ಮುಂತಾದ ಕಡೆಗಳಲ್ಲಿ ಮಳೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net