ಮಳೆಗೆ ಮುರಿದುಬಿದ್ದ ಮರಗಿಡಗಳು, ಮನೆಗಳಿಗೆ ಹಾನಿ

Oplus_131072
ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ನಗರಸಭಾ ಅಧ್ಯಕ್ಷ ಶ್ರೀಕಂಠ, ಪೌರಾಯುಕ್ತ ವಿಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Published on

ನಂಜನಗೂಡು: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಗಾಳಿ ಮಳೆಗೆ ತೆಂಗಿನ ಮರ ಮನೆ ಮೇಲೆ ಮುರಿದು ಬಿದ್ದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೆ ಮಳೆಗೆ ಮೂರು ಮನೆಗಳ ಛಾವಣಿ ಹಾರಿ ಹೋಗಿದೆ.

ಪಟ್ಟಣದ ಹೌಸಿಂಗ್ ಬೋರ್ಡ್‌ನ ಜೈಮಾಲಾ ಅವರ ಮನೆ ಮೇಲೆ ಮನೆಯ ಹಿಂಭಾಗದಲ್ಲಿದ್ದ ಬೃಹತ್ ಗಾತ್ರದ ತೆಂಗಿನ ಮರವೊಂದು ಬಿದ್ದು, ಮನೆ ಸಂಪೂರ್ಣವಾಗಿ ಜಖಂಗೊಂಡಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಟ್ಟಣದ 18ನೇ ವಾರ್ಡ್ ನಲ್ಲಿ ಜ್ಯೋತಿ, ವೃಷಭಭಾನು, ಶಭ ಪಿರ್ದೋಶ ಅವರ ಮನೆಯ ಶೀಟ್ ಛಾವಣಿ ಹಾರಿ ಹೋಗಿವೆ. ಮನೆಯಲ್ಲಿದ್ದ ದವಸ ಧಾನ್ಯ, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿವೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಸ್ಥಳಕ್ಕೆ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಯಾನ ಬಾನು, ನಗರಸಭಾ ಆಯುಕ್ತ ವಿಜಯ್, ನಗರಸಭಾ ಸದಸ್ಯೆ ಮೀನಾಕ್ಷಿ ನಾಗರಾಜು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net