ಬೆಳ್ತಂಗಡಿ ತಾಲೂಕಾದ್ಯಂತ ಮಳೆಗೆ ಹಾನಿ

New Project (5)
Published on

ಬೆಳ್ತಂಗಡಿ: ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪ ಅವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ. ಜತೆಗೆ ಮರ, ಗುಡ್ಡ ಕುಸಿದು ಮನೆಗೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರ್ಥಿಕ ಸಹಾಯ ನೀಡಿದರು. ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಬಂದಾರು ಗ್ರಾಪಂ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ., ಪ್ರಮುಖರಾದ ಪ್ರಶಾಂತ್ ಗೌಡ ನಿರುಂಬುಡ, ಮನೆಯವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net