

ಮಡಿಕೇರಿ: ರಾಜ್ಯದ ಹವಾಮಾನ ಮತ್ತು ಮಳೆ ಬೆಳೆ ಸಂಬಂಧಿತ ಸ್ಥಿತಿಗತಿಗಳ ಕುರಿತು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿಡಿಯೋ ಸಂವಾದ ಮೂಲಕ ಬುಧವಾರ ಮಾಹಿತಿ ಪಡೆದರು.
ವಿಡಿಯೋ ಸಂವಾದದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಜಿ.ಪಂ.ಯೋಜನಾ ನಿರ್ದೇಶಕ ಜಗದೀಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬನಾ ಎಂ.ಶೇಖ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್, ಹಾರಂಗಿ ಜಲಾಶಯ ಎಂಜಿನಿಯರ್ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ, ಸೆಸ್ಕ್ ಎಂಜಿನಿಯರ್ ಅನಿತಾ ಬಾಯಿ, ಪಿಎಲ್‌ಇಡಿ ಎಂಜಿನಿಯರ್ ಸುರೇಶ್‌ಕುಮಾರ್, ಇತರರು ಇದ್ದರು.