ಮಳೆ ಹಾನಿ ಅಂದಾಜಿಸುವುದಕ್ಕಾಗಿ ಜಿಲ್ಲಾಧಿಕಾರಿಗಳ ಜತೆಗೆ ನಾಳೆ ವಿಡಿಯೋ ಸಂವಾದ ನಡೆಸ್ತೇನೆ: ಮುಖ್ಯಮಂತ್ರಿ ಬಿಎಸ್​ವೈ

BSY JPG
Published on

ಬೆಂಗಳೂರು: ಭಾರಿ ಮಳೆಯಿಂದಾದ ಹಾನಿ, ಕೈಗೊಂಡ ಪರಿಹಾರ ಕ್ರಮಗಳ ಪರಿಶೀಲನೆಗಾಗಿ ಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ವಿಡಿಯೋ ಸಂವಾದ ನಡೆಸಲಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಪಾರ್ಕ್ ಯೋಜನೆಗೆ ಗುರುವಾರ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯ ತೀವ್ರತೆಯಿಂದ ನಲುಗಿರುವ ಜಿಲ್ಲೆಗಳ ಡಿಸಿಗಳಿಗೆ ಈಗಾಗಲೇ ಅಗತ್ಯ ಸೂಚನೆ ತುರ್ತು ಪರಿಹಾರ ಕಾರ್ಯಗಳಿಗೆ ಅಗತ್ಯವಾದ ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮಳೆಯಿಂದಾದ ನಷ್ಟದ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿರುವೆ ಎಂದು ಹೇಳಿದರು.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳು ತತ್ತರಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net