ಮಳೆಹಾನಿ ಪರಿಶೀಲಿಸಿದ ಶಾಸಕ ಟೆಂಗಿನಕಾಯಿ

New Mahesh New
Published on

ಹುಬ್ಬಳ್ಳಿ : ನಗರದ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ಬಳಿಯ ಆರ್.ಎನ್. ಶೆಟ್ಟಿ ಫ್ಯಾಕ್ಟರಿ ರಸ್ತೆಯಲ್ಲಿ ನಡೆಯುತ್ತಿರುವ ಒಳ ಚರಂಡಿ ಕಾಮಗಾರಿ ಹಾಗೂ ಎಲ್​ಎನ್ ಆಂಡ್ ಟಿ ನೀರು ಸರಬರಾಜು ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ಇತ್ತೀಚೆಗೆ ವೀಕ್ಷಿಸಿದರು.

ನಗರದಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಆಗಿರುವ ಸಮಸ್ಯೆಗಳನ್ನು ಸಹ ಶಾಸಕರು ಇದೇ ಸಂದರ್ಭದಲ್ಲಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಗೋಕುಲ ರಸ್ತೆಯಿಂದ ಸಿದ್ಧಾರೂಢ ಮಠಕ್ಕೆ ಹೋಗುವ ರಸ್ತೆ ಪ್ರಮುಖವಾಗಿದ್ದು, ಇಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಅಧಿಕಾರಿಗಳಿಗೆ ಸೂಚಿಸಿದರು.

ಒಳಚರಂಡಿ ಮತ್ತು ಎಲ್ ಆಂಡ್ ಟಿ ಕಂಪನಿಯ ಕಾಮಗಾರಿಗಳು ಪೂರ್ಣಗೊಂಡ ನಂತರ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ತಿಳಿಸಿದರು.

ಲೋಕೋಪಯೋಗಿ, ಪಾಲಿಕೆ, ಎಲ್ ಆಂಡ್ ಟಿ ಸಿಬ್ಬಂದಿ ಹಾಗೂ ಸ್ಥಳೀಯ ನಾಗರಿಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net