ಜುಲೈನಲ್ಲಿಯೂ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ: ಐಎಂಡಿ ವರದಿಯಲ್ಲಿ ಬಹಿರಂಗ

rain
Published on

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜುಲೈನಲ್ಲಿಯೂ ಮಳೆ ಕೊರತೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿದುಬಂದಿದೆ.

ಬೆಂಗಳೂರು ನಗರ, ಬೆ.ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ವಿಜಯಪುರ ಮತ್ತು ಗದಗದಲ್ಲಿ ಜೂನ್ ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು.

ಇದೀಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿ ಸೇರಿ ದಕ್ಷಿಣ ಕರ್ನಾಟಕದ ವ್ಯಾಪ್ತಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಲೆನಾಡು,ಕರಾವಳಿಯಲ್ಲಿ ಜೋರು:ಜೂನ್ ಅವಧಿಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ವಾಡಿಕೆಗಿಂತ ಅಧಿಕ ವರ್ಷಧಾರೆಯಾಗಿತ್ತು. ಜುಲೈನಲ್ಲಿಯೂ ಈ ಮೇಲಿನ ಜಿಲ್ಲೆಗಳಲ್ಲಿ ಚೆನ್ನಾಗಿ ಮಳೆ ಸುರಿಯಲಿದೆ.

ರಾಜ್ಯದಲ್ಲಿ ಜೂನ್‌ನಲ್ಲಿ ವಾಡಿಕೆಯಷ್ಟೇ ಸುರಿದ್ದರೂ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ ಉಂಟಾಗಿದೆ. ಜುಲೈನಲ್ಲಿ ಕೆಲ ಪ್ರದೇಶಗಳಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚು ಸುರಿದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ ಮಳೆ ಕೊರತೆಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net