

ರಾಯಚೂರು ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಸುರಿದ ಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು,ನಗರದ ವಿವಿದೆಡೆ ವಿದ್ಯುತ್ ಕಂಬಗಳು, ಗಿಡಮರಗಳು ಉರುಳಿ ನಗರದಲ್ಲಿ ಸಂಚಾರ ದಟ್ಟಣೆ ಸೇರಿದಂತೆ ಜನರಿಗೆ ಸಾಕಷ್ಟು ತೊಂದರೆ ಉಂಟಾಯಿತು.
ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಹಲ ವೆಡೆ ಅಕಾಲಿಕ ಮಳೆಯಾಗುತ್ತಿರುವ ಹಿನ್ನಲೆ ಜನರು ನಲುಗಿ ಹೋಗಿದ್ದಾರೆ. ಮಂಗಳವಾರ ರಾತ್ರಿ ಸಿಂಧನೂರು, ಮಸ್ಕಿ, ಲಿಂಗಸುಗೂರು ಹಾಗೂ ಮಾನ್ವಿ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಸುರಿದ ಭಾರಿ ಮಳೆಗೆ ಸಾಕಷ್ಟು ಹಾನಿ ಉಂಟಾಗಿದ್ದರ ಬೆನ್ನೆಲೆ ಬಿರುಗಾಳಿ ಸಹಿತ ಮಳೆ ಸಾಕಷ್ಟು ತೊಂದರೆಯನ್ನುಂಟು ಮಾಡಿತು.
ಮಳೆ ಆರಂಭವಾಗಿ ನಗರದಲ್ಲಿ ವಿದ್ಯುತ್ ಟಿಸಿಗಳು, ಕಂಬಗಳು, ಗಿಡ ಮರ ನೆಲಕರುಳಿದ್ದವು. ಈ ಹಿನ್ನೆಲೆ ನಗರದಲ್ಲಿ ವಿದ್ಯುತ್ ಕಡಿತವಾಗಿ ಜನರಿಗೆ ತೊಂದರೆ ಎದುರಾಯಿತು.