ಜಡಿ ಮಳೆಗೆ ಬೆಳೆ ನಷ್ಟದ ಭೀತಿ

raagi
filter: 0; fileterIntensity: 0.0; filterMask: 0; captureOrientation: 0; hdrForward: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 41;
Published on

 ನಂದಗುಡಿ ಎಂ. ರಾಮೇಗೌಡ,

ರಾಗಿ, ಜೋಳ ಹಲಸಂದಿ, ತೊಗರಿ ಸೇರಿ ಮತ್ತಿತರ ಬೆಳೆಗಳಿಗೆ ಮಳೆ ಕೊರತೆ ಆತಂಕ ಅನುಭವಿಸುತ್ತಿದ್ದ ರೈತರ ಪಾಲಿಗೆ ಇದೀಗ ಸುರಿಯುತ್ತಿರುವ ಧಾರಾಕಾರ ಮಳೆಬೆಳೆ ನಷ್ಟದ ಭೀತಿ ಹುಟ್ಟಿಸಿದೆ.

ನಂದಗುಡಿ ಹೋಬಳಿ ಸೇರಿ ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರಮುಖ ಬೆಳೆಯಾದ ರಾಗಿ ಸಲು ನೆಲಕಚ್ಚುವ ಆತಂಕ ಎದುರಾಗಿದೆ.

ಹೊಸಕೋಟೆ ತಾಲೂಕಿನಲ್ಲಿ ಮಳೆಯಾಶ್ರಿತ 10 ಸಾವಿರ ಹೆಕ್ಟೇರ್, ನೀರಾವರಿ 215 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗಿದೆ. ರಾಜ್ಯ ಸರ್ಕಾರ ಈಗಾಗಲೇ ರಾಗಿ ಖರೀದಿಗಾಗಿ ಖರೀದಿ ಕೇಂದ್ರ ತೆರೆಯಲು ಸಿದ್ಧತೆ ನಡೆಸಿದೆ. ಎಪಿಎಂಸಿ ಮಾರುಕಟ್ಟೆ ಕೇಂದ್ರಗಳಲ್ಲಿ ರೈತರ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಇದರ ಮಧ್ಯೆ ಮಳೆರಾಯ ರೈತರ ಮೇಲೆ ಪ್ರತಾಪ ತೋರಿಸುತ್ತಿರುವಂತಿದೆ.

ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ರಾಗಿ ಬಿತ್ತನೆ ಮಾಡಲಾಗಿದೆ.ಆದರೆ, ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಗಿ ಬೆಳೆ ನೆಲಕಚ್ಚುತ್ತಿದೆ.

ತೇವಾಂಶದಿಂದ ಆತಂಕ: ಪ್ರಸ್ತುತ ಕಾಳು ಕಟ್ಟುವಹಂತದಲ್ಲಿರುವ ರಾಗಿ ಬೆಳೆ ತೂಕ ಹಾಗೂ ತೇವಾಂಶ ಹೆಚ್ಚಾಗಿರುವ ಕಾರಣ ನೆಲಕ್ಕುರುಳಿದೆ. ಇದರಿಂದಾಗಿ ಬೆಳೆ ನಷ್ಟವಾಗುವ ಭೀತಿ ಎದುರಾಗಿದೆ. ಹಾಕಿದ ಬಂಡವಾಳ ಕೈಗೆ ಬರುತ್ತದೋ ಇಲ್ಲವೋ ಎಂಬ ಆತಂಕ ಕಾಡಲಾರಂಭಿಸಿದೆ. ರಾಗಿ ನೆಲಕಚ್ಚುತ್ತಿರುವುದರಿಂದ ತೆನೆ ಮತ್ತು ಮೇವು ಮಣ್ಣಾಗಿ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಕಾಡಲಿದೆ ಎಂಬ ಆತಂಕ ರೈತರದ್ದಾಗಿದೆ. ಅಕ್ಟೋಬರ್‌ನಲ್ಲಿ ಸುರಿದ ಮಳೆ ಪರಿಣಾಮ ಬೆಳೆ ನೆಲಕಚ್ಚಿದೆ. ನೆಲಕಚ್ಚಿರುವ ರಾಗಿ ಕೈಗೆ ಸಿಗುವುದೋ ಅಥವಾ ಇಲ್ಲವೋ ಎಂಬ ಆತಂಕ ಆವರಿಸಿದೆ.

ಬೆಂಕಿರೋಗ: ಅನೇಕ ಕಡೆಗಳಲ್ಲಿ ರಾಗಿ ಬೆಳೆಗೆ ಬೆಂಕಿ ರೋಗ ಕಾಣಿಸಿಕೊಂಡಿಸಿರುವುದು ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಸಾಲ ಮಾಡಿ ರಾಗಿ ಬೆಳೆ ಮಾಡಿದ್ದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕೃಷಿ ಇಲಾಖೆ ಅಧಿಕಾರಿಗಳು ವಾತಾವರಣ ಬದಲಾವಣೆಯಿಂದಾಗಿ ರೋಗ ಕಾಣಿಸಿಕೊಂಡಿದೆ ಎಂದು ಹೇಳಿ ಕೈಚೆಲ್ಲುತ್ತಿದ್ದಾರೆ ವಿನಾ ಇನ್ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ರೈತರು ದೂರಿದ್ದಾರೆ.

ಈ ಬಾರಿ ತಾಲೂಕಿನಲ್ಲಿ ಮಳೆಯಾಶ್ರಿತ 10 ಸಾವಿರ ಹೆಕ್ಟೇರ್, ನೀರಾವರಿ 215 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಮಾಡಲಾಗಿದೆ. ರಾಗಿ ಬೆಳೆಗೆ ವಿಮೆ 850 ರೈತರು ಪ್ರೊಪೋಸಲ್ ಮಾಡಿದ್ದಾರೆ. ಒಂದು ಹೆಕ್ಟೇರ್‌ಗೆ 16 ರಿಂದ 20 ಕ್ವಿಂಟಾಲ್ ಇಳುವರಿ ನಿರೀಕ್ಷೆಯಲ್ಲಿದ್ದೇವೆ. ಬೆಂಕಿ ರೋಗದ ಬಗ್ಗೆ ಆತಂಕ ಬೇಡ. ಈಗಾಗಲೇ ಬಿತ್ತನೆ ವೇಳೆ ರೈತರಿಗೆ ಎರಡು ಬಾರಿ ತರಬೇತಿ ನೀಡಲಾಗಿದೆ.

ಚಂದ್ರಪ್ಪ, ಸಹಾಯಕ ನಿರ್ದೇಶಕ ಕೃಷಿ ಇಲಾಖೆ ಹೊಸಕೋಟೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net