ಸತತ ಮಳೆಯಿಂದಾಗಿ ಗೋಡೆ ಕುಸಿದು ವೃದ್ಧೆ ಸಾವು

1MND-2
Published on

ಮಂಡ್ಯ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಸಾಹುಕಾರ್ ಚನ್ನಯ್ಯ ಬಡಾವಣೆಯಲ್ಲಿ ಗುರುವಾರ ಬೆಳಗ್ಗೆ ಮನೆ ಗೋಡೆ ಕುಸಿದು ವೃದ್ಧೆ ಮೃತಪಟ್ಟಿದ್ದಾರೆ.
ಬಡಾವಣೆಯ 7ನೇ ಕ್ರಾಸ್ ನಿವಾಸಿ ಪಾರ್ವತಿ ಬಾಯಿ(75) ಮೃತೆ. ಸತತವಾಗಿ ಮಳೆ ಬಂದ ಹಿನ್ನೆಲೆಯಲ್ಲಿ ಇವರು ವಾಸವಿದ್ದ ಶೀಟ್ ಮನೆಯ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಪಾರ್ವತಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈಕೆ ಒಬ್ಬರೇ ಮನೆಯಲ್ಲಿ ವಾಸವಿದ್ದರು. ಇನ್ನು ಗೋಡೆ ದೇಹದ ಮುಖದ ಮೇಲೆ ಬಿದ್ದಿದೆ. ಅದರಲ್ಲೂ ಮುಖದ ಮೇಲೆ ಕುಸಿದಿರುವುದರಿಂದ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಕುಂಞ ಅಹಮದ್ ಭೇಟಿ ನೀಡಿ ಪರಿಶೀಲಿಸಿದರು.
ಇತ್ತ ಮಳೆ ಅಬ್ಬರಿಸುತ್ತಿರುವುದರಿಂದ ಮದ್ದೂರು ಪಟ್ಟಣದಲ್ಲಿರುವ ಪುರಾಣ ಪ್ರಸಿದ್ದ ಉಗ್ರ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಸೇರಿದ ರಥದ ಮನೆ ಗೋಡೆ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಈಗಾಗಲೇ ಒಂದು ಭಾಗ ಕುಸಿದಿದ್ದು, ಮತ್ತೆ ಮಳೆಯಾದರೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಇನ್ನು ಮಳೆಯಿಂದಾಗಿ ಕಚೇರಿಗೆ ಗೋಡೆಗಳು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿಯನ್ನು ಇಲಾಖೆಯ ವಸತಿಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net