ಮಳೆ ಹಾನಿ ಪ್ರದೇಶಕ್ಕೆ ಸಚಿವದ್ವಯರ ಭೇಟಿ

ಮಳೆ ಹಾನಿ
Published on

ಮಂಡ್ಯ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಮಂಡ್ಯದ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾತನೂರಿನಲ್ಲಿ ಕೆರೆ ಕೋಡಿ ಒಡೆದು ರಸ್ತೆಗಳು ಕೊಚ್ಚಿ ಹೋಗಿದ್ದು, ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿತ್ತು. ಮಳೆಹಾನಿಯನ್ನು ಪರಿಶೀಲಿಸಿ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚಿಸಿದರು. ಉಮ್ಮಡಹಳ್ಳಿಯಲ್ಲಿ ಮಳೆಯಿಂದ ಮನೆ ಕುಸಿದು 40ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವುದನ್ನು ಪರಿಶೀಲನೆ ನಡೆಸಿ, ನಷ್ಟಕ್ಕೊಳಗಾದವರಿಗೆ ಸ್ಥಳದಲ್ಲೇ 90 ಸಾವಿರ ರೂ ಪರಿಹಾರ ಚೆಕ್ ವಿತರಿಸಿದರು. 
ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ಎಂ.ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್.ಅಶ್ವಥಿ, ಉಪವಿಭಾಗಾಧಿಕಾರಿ ಐಶ್ವರ್ಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net