ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ

Rain effect tree fallen
Published on

ಹೊನ್ನಾವರ: ತಾಲೂಕಿನ ಕರ್ಕಿಯ ದೈವಜ್ಞ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ಸುರಿದ ಗಾಳಿ ಮಳೆಯಿಂದ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ಐದು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಹಳದೀಪುರ, ಕರ್ಕಿಯ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜೋರಾದ ಗಾಳಿ ಮಳೆಗೆ ಕೆಲವೆಡೆ ಮರಗಳು ಮುರಿದು ಬಿದ್ದಿವೆ. ವಿದ್ಯುತ್ ತಂತಿ ತುಂಡಾಗಿರುವುದರಿಂದ ಸೋಮವಾರ ರಾತ್ರಿ ಮತ್ತು ಮಂಗಳವಾರ ಬೆಳಿಗ್ಗೆ ವಿದ್ಯುತ್ ಕಡಿತವಾಗಿ ಸಾರ್ವಜನಿಕರು ತೊಂದರೆ ಪಡುವಂತಾಯಿತು. ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ನೀಡಲು ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net