ಭಾರೀ ಮಳೆಗೆ ಬೆಳಗಾವಿಗರು ತತ್ತರ!

Screenshot_20240514_194336_WhatsApp.jpg
Published on

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಗುಡಗು–ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು.

ಬೆಳಗಾವಿಯಲ್ಲಿ ಮಧ್ಯಾಹ್ನದಿಂದ ಮೋಡ ಕವಿದಿತ್ತು. ಸಂಜೆ ಜೋರಾಗಿ ಮಳೆ ಸುರಿದಿದ್ದರಿಂದ ವಾತಾವರಣ ತಂಪೇರಿತು. ಕೆಲವು ಮಾರ್ಗಗಳ ರಸ್ತೆಗಳಲ್ಲಿ ಮಳೆ ನೀರು ಅಪಾರ ಪ್ರಮಾಣದಲ್ಲಿ ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು.
ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರ–ವಹಿವಾಟಿಗೆ ತೊಡಕಾಯಿತು.

ಬೈಲಹೊಂಗಲ, ಹುಕ್ಕೇರಿ, ಗೋಕಾಕ, ಮೂಡಲಗಿಯಲ್ಲಿ ಧಾರಾಕಾರ ಮಳೆ ಸುರಿದರೆ, ಚನ್ನಮ್ಮನ ಕಿತ್ತೂರು, ಎಂ.ಕೆ.ಹುಬ್ಬಳ್ಳಿ, ಹಿರೇಬಾಗೇವಾಡಿಯಲ್ಲಿ ಉತ್ತಮ ಮಳೆಯಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net