ಕರಾವಳಿಯ ವಿವಿಧೆಡೆ ಗುಡುಗು ಸಹಿತ ಮಳೆ

Screenshot_20240322_130508_WhatsApp
Published on

ಮಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ಗಡಿ ಪ್ರದೇಶ ತಲಪಾಡಿ, ಮಂಜೇಶ್ವರ ಸಹಿತ ವಿವಿಧೆಡೆ ಶುಕ್ರವಾರ ಬೆಳಗ್ಗೆ ಗುಡುಗು ಸಹಿತ ಮಳೆಯಾಗಿದೆ.
ಸುರತ್ಕಲ್, ಗುರುಪುರ, ತಲಪಾಡಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದರೆ, ಅನೇಕ ಕಡೆ ಸಾಮಾನ್ಯ ಮಳೆಯಾಗಿದೆ.
ಇನ್ನೆರಡು ದಿನ ರಾಜ್ಯದ ಕೆಲ ಭಾಗಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಅಧಿಕ ತಾಪಮಾನದಿಂದ ಬಸವಳಿದಿದ್ದ ಜನತೆ ತಾಸು ಕಾಲ ಸುರಿದಿದ್ದ ಮಳೆಯಿಂದ ನಿಟ್ಟುಸಿರು ಬಿಡುವಂತಾಯಿತು.

ಕೇರಳ- ಕರ್ನಾಟಕ ಗಡಿ ಪ್ರದೇಶ ತಲಪಾಡಿಯಲ್ಲಿ ಶುಕ್ರವಾರ ಬೆಳಗ್ಗೆ ತಾಸು ಕಾಲ ಬಿರುಸಿನ ಮಳೆ ಸುರಿಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net