ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ

Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರವೂ ಮಳೆ ಮುಂದುವರಿದಿ. ದಿನವಿಡಿ ಮೋಡ ಕವಿದ ವಾತಾವರಣವಿದ್ದು, ಆಗಾಗ ಉತ್ತಮ ಮಳೆ ಸುರಿದಿದೆ. ಬೆಳಗ್ಗಿನಿಂದಲೇ ಜಿಲ್ಲೆಯ ಬಹುತೇಕ ಕಡೆ ಮಳೆಯಾಗಿದೆ. ಸಂಜೆ ವೇಳೆ ಮಂಗಳೂರು ನಗರ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಕೆಲಕಾಲ ಧಾರಾಕಾರ ಮಳೆ ಸುರಿದಿದೆ. ಭಾನುವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನವರೆಗೆ ಜಿಲ್ಲೆಯಲ್ಲಿ ಸರಾಸರಿ 23.2 ಮಿಮೀ ಮಳೆ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net