ಜಿಲ್ಲಾದ್ಯಂತ ತಂಪೆರೆದ ಮಳೆ

18 AKR Rain
Published on

ಹಾವೇರಿ: ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು, ಮಿಂಚು ಸಹಿತ ಭರ್ಜರಿ ಮಳೆ ಸುರಿದಿದೆ. ಹಾವೇರಿ, ಹಿರೇಕೆರೂರು, ಬ್ಯಾಡಗಿ ಭಾಗದಲ್ಲಿ ಸಂಜೆ 6.30 ರ ಸುಮಾರಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದಿದೆ. ಶಿಗ್ಗಾಂವಿ ಭಾಗದಲ್ಲಿ ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗಿದೆ. ಸವಣೂರು, ರಾಣೆಬೆನ್ನೂರು, ಹಾನಗಲ್ಲ ತಾಲೂಕುಗಳಲ್ಲಿಯೂ ಗುಡುಗು ಮಿಂಚು ಸಹಿತ ತುಂತುರು ಮಳೆಯಾಗಿದೆ. ಇದರಿಂದ ಬೇಸಿಗೆ ಬಿಸಿಲಿನಿಂದ ಬಸವಳಿದ ಜನರಿಗೆ ಸ್ವಲ್ಪ ತಂಪಿನ ವಾತಾವರಣ ಖುಷಿ ನೀಡಿದೆ.<

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net