ಮಂಗಳೂರಿನಲ್ಲಿ ಮುಂಜಾನೆಯಿಂದ ಜಿಟಿಜಿಟಿ ಮಳೆ

IMG-20220511-WA0001
Published on

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಅಸನಿ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲೂ ಮಳೆಯಾಗುತ್ತಿದೆ. ಮಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣದೊಂದಿಗೆ ಜಿಟಿಜಿಟಿ ಸುರಿಯುತ್ತಿದೆ. ಗ್ರಾಮೀಣ ಭಾಗದಲ್ಲಿ ಮಳೆ ಪ್ರಮಾಣ ತುಸು ಜಾಸ್ತಿಯಿದೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಾತಾವರಣದಲ್ಲಿ ತಂಪಾಗಿದೆ. ಬಿಸಿಲ ಬೇಗೆಯಿಂದ ಬಳಲುತ್ತಿದ್ದವರಿಗೆ ತುಸು ತಂಪಿನ ಅನುಭವವಾಗಿದೆ. ಪ್ರಸ್ತುತ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net