10ರಿಂದ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Delhi Rain
Published on

ಬೆಂಗಳೂರು: ರಾಜ್ಯದಲ್ಲಿ ಮೇ 10ರಿಂದ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ,ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ನಗರ, ಬೆಂ .ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಮೇ 10ರಿಂದ ಮೇ 13ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ.

ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಬಳ್ಳಾರಿ,ಯಾದಗಿರಿ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಗದಗದಲ್ಲಿ ಮೇ.10ರಿಂದ ಮುಂದಿನ 3 ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಅಲ್ಲದೆ, ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಂದರ್ಭದಲ್ಲಿ ಪ್ರತಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮಳೆ ಕ್ಷೀಣವಾಗಿರುವ ಹಿನ್ನೆಲೆಯಲ್ಲಿ ಮೇ 6ರಿಂದ ಮೇ 9ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ.ಕಲಬುರಗಿಯಲ್ಲಿ 41.2, ಬೀದರ್​ 40.6,ರಾಯಚೂರು 40.4 ಡಿ.ಸೆ. ಉಷ್ಣಾಂಶ ಸೋಮವಾರ ದಾಖಲಾಗಿದೆ.

ಪೂರ್ವ ಮುಂಗಾರು ಅಧಿಕ: ರಾಜ್ಯದಲ್ಲಿ ಮಾ.1ರಿಂದ ಮಾ.5ರವರೆಗೆ ವಾಡಿಕೆಯಂತೆ 51 ಮಿಮೀ ಮಳೆಯಾಗಬೇಕಿತ್ತು. ಆದರೆ, 79 ಮಿಮೀ ಮಳೆಯಾಗಿದ್ದು,ವಾಡಿಕೆಗಿಂತ ಶೇ.55 ಅಧಿಕವಾಗಿ ಸುರಿದಿದೆ. ಕರಾವಳಿ ಶೇ.84, ಮಲೆನಾಡು ಶೇ.52,ದಣ ಕರ್ನಾಟಕ ಶೇ.54, ಉತ್ತರ ಕರ್ನಾಟಕದಲ್ಲಿ ಶೇ.47 ವಾಡಿಕೆಗಿಂತ ಹೆಚ್ಚು ಸುರಿದಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಉಡುಪಿ ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಉತ್ತಮವಾಗಿ ಸುರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net