ಗರ್ವಾಲೆ ಗ್ರಾಪಂ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ

8spt2-
ಸೋಮವಾರಪೇಟೆ ತಾಲೂಕು ಗರ್ವಾಲೆ ಗ್ರಾಮದ ಅಂಗನವಾಡಿ ಕೇಂದ್ರದ ಮೇಲೆ ಮರದ ರೆಂಬೆ ಬಿದ್ದು ಅಂಗನವಾಡಿ ಛಾವಣಿ ಸಂಪೂರ್ಣ ಹಾನಿಯಾಗಿದೆ.
Published on

ಸೋಮವಾರಪೇಟೆ: ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧಾರಾಕಾರ ಬಿರುಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಸೂರ್ಲಬ್ಬಿ, ಕಿಕ್ಕರಳ್ಳಿ, ಕುಂಬಾರಗಡಿಗೆ, ಮುಟ್ಲು, ಹಮ್ಮಿಯಾಲ, ಮಂಕ್ಯಾದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿದೆ. ಕೊಲ್ಲಿ, ತೋಡುಗಳು ತುಂಬಿ ಹರಿಯುತ್ತಿವೆ. ಭತ್ತದ ಗದ್ದೆಯಲ್ಲಿ ನೀರು ಸಂಗ್ರಹವಾಗಿದೆ. ಕೆಲವು ಗದ್ದೆಗಳಲ್ಲಿ ಹೂಳು ತುಂಬಿದೆ. ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಗರ್ವಾಲೆ ಗ್ರಾಮದ ಜಂಕ್ಷನ್‌ನಲ್ಲಿರುವ ಅಂಗನವಾಡಿ ಕೇಂದ್ರದ ಮೇಲೆ ಮಂಗಳವಾರ ಬೆಳಗ್ಗೆ ಮರದ ದೊಡ್ಡ ರೆಂಬೆ ಮುರಿದು ಬಿದ್ದ ಪರಿಣಾಮ ಅಂಗನವಾಡಿಯ ಛಾವಣಿ ಜಖಂಗೊಂಡಿದೆ. ಈ ಸಂದರ್ಭ ಅಂಗನವಾಡಿಯಲ್ಲಿ ಕೆಲಸ ಪ್ರಾರಂಭಿಸಿದ್ದ ಅಂಗನವಾಡಿ ಸಹಾಯಕಿ ಬೇಬಿ ಅವರಿಗೆ ತಲೆಗೆ ಗಾಯಗಳಾಗಿವೆ. ಮಾದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡ ನಡೆದ ಸಂದರ್ಭದಲ್ಲಿ ಮಕ್ಕಳು ಕೇಂದ್ರದಲ್ಲಿ ಇಲ್ಲದ ಕಾರಣ ಹೆಚ್ಚಿನ ನಾಹುತ ತಪ್ಪಿದೆ.

ಸ್ಥಳಕ್ಕೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಭೇಟಿ ನೀಡಿ ಮಾಹಿತಿ ಪಡೆದರು. ಅರಣ್ಯ ಇಲಾಖೆ ಸಿಬ್ಬಂದಿ ಮರದ ರೆಂಬೆಗಳನ್ನು ತೆರವುಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net