ರಾಜ್ಯದಲ್ಲಿ 5 ದಿನ ಮಳೆ:ಉತ್ತರ ಕರ್ನಾಟಕದಲ್ಲಿ ಜೋರು

rain (5)
Published on

ಬೆಂಗಳೂರು:ರಾಜ್ಯದ ಹಲವೆಡೆ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿರುಸಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬಾಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸೆ.23ರಿಂದ ಸೆ.24ರವರೆಗೆ ಹಾಗೂ ಬೀದರ್‌ನಲ್ಲಿ ಸೆ.24ರಿಂದ ಮುಂದಿನ 2 ದಿನ ಜೋರಾಗಿ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಮೇಲಿನ ಜಿಲ್ಲೆಗಳಲ್ಲಿ ಸೆ.27 ರಿಂದ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಇರಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಸೆ.27ರಿಂದ ಸೆ.29ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು,ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರದಲ್ಲಿ ಮುಂದಿನ 5 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದೆ. ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಈ ಅವಧಿಯಲ್ಲಿ ಸಾಧಾರಣ ಮಳೆ ಸುರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 20 ಡಿ.ಸೆ. ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net