ಕರಾವಳಿ, ಉ.ಕ.ದಲ್ಲಿ ಮಳೆ ಆರ್ಭಟ: ಉತ್ತರಕನ್ನಡದಲ್ಲಿ ನಾಳೆ ರೆಡ್​ ಅಲರ್ಟ್​​​​

anp RAIN
ಭದ್ರಾವತಿ ಕಣಕಟ್ಟೆ ಗ್ರಾಮದಲ್ಲಿ ಪ್ರತಿಷ್ಠಾಪಿಸಿರುವ 22 ಅಡಿ ಎತ್ತರದ ಗಣಪತಿ ಮೂರ್ತಿ.
Published on

ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸುಗೊಂಡಿದೆ.

ಚಿಕ್ಕಮಗಳೂರಿನ ಮೂಡಗೆರೆ, ಕಲಬುರಗಿಯ ಗಂಗಾಪುರ, ಹಾವೇರಿಯ ಹನುಮಾನಮಟ್ಟಿ, ಯಾದಗಿರಿಯ ಭೀಮರಾಯನಗುಡಿ, ದಾವಣಗೆರೆ ಸೇರಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸೋಮವಾರ ವರ್ಷಧಾರೆಯಾಗಿದೆ. 2 ದಿನಗಳಿಂದ ಮಳೆ ಸುರಿಯುತ್ತಿರುವ ಬೆನ್ನಲ್ಲೇ ಬಾಡುತ್ತಿದ್ದ ಹಲವು ಬೆಳೆಗಳಿಗೆ ವರದಾನವಾಗಿದೆ.

ಸೆ.24ರಂದು ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಕೊಟ್ಟಿದೆ.ಈ ಸಂದರ್ಭದಲ್ಲಿ 204 ಮಿಮೀವರೆಗೆ ಮಳೆ ಬೀಳುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಸೆ.24ರಂದು ಭಾರಿ ಮಳೆ ಸುರಿಯುವ ಸಂಭವ ಇರುವುದರಿಂದ ಆರೆಂಜ್​ ಅರ್ಲಟ್​ ನೀಡಲಾಗಿದೆ. ವಿಜಯಪುರ, ರಾಯಚೂರು, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಮುಂದಿನ 24 ಗಂಟೆ ಕಾಲ ಯೆಲ್ಲೋ ಅರ್ಲಟ್​ ಇರಲಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net