12ರಿಂದ ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

Rainy weather
Rainy weather
Published on

ಬೆಂಗಳೂರು:ಮುಂಗಾರು ಪ್ರವೇಶಿಸಲು ದಿನಗಣನೆ ಆರಂಭವಾಗಿರುವ ನಡುವೆಯೂ ರಾಜ್ಯದ ಹಲವೆಡೆ ಮೇ 12ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು, ಹಾಸನ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಮೇ 12ರಿಂದ ಮುಂದಿನ 3 ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್​, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯ ಆಯ್ದ ಪ್ರದೇಶಗಳಲ್ಲಿ ಮೇ 12ರಿಂದ ಮುಂದಿನ 3 ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.

ರಾಜ್ಯದ ಕೆಲವೆಡೆ ಮಾತ್ರ ಮೇ 8 ರಿಂದ ಮೇ 12ರವರೆಗೆ ಹಗುರದಿಂದ ಕೂಡಿದ ತುಂತುರು ಮಳೆಯಾಗಲಿದೆ. ಆಯ್ದ ಪ್ರದೇಶಗಳಲ್ಲಿ ಗಂಟೆಗೆ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಬೀದರ್​, ವಿಜಯಪುರ, ಕಲಬುರಗಿ, ರಾಯಚೂರು ಸೇರಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿ.ಸೆ.ದಾಟಿದೆ. ರಾಜ್ಯದಲ್ಲಿ ಮುಂದಿನ 5 ದಿನ ಗರಿಷ್ಠ ತಾಪಮಾನದಲ್ಲಿ ದೊಡ್ದ ಮಟ್ಟದಲ್ಲಿ ಬದಲಾವಣೆ ಇರುವುದಿಲ್ಲ. ದಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 35-36 ಡಿ.ಸೆ. ಉಷ್ಣಾಂಶ ದಾಖಲಾಗುತ್ತಿದೆ. ಈ ಬಾರಿ ಪೂರ್ವ ಮುಂಗಾರಿನ ಅವಧಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಾ.1ರಿಂದ ಮೇ 17ರವರೆಗೆ ವಾಡಿಕೆಗಿಂತ ಅಧಿಕವಾಗಿ ಸುರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net