ರಾಜ್ಯದಲ್ಲಿ ಸಂಕ್ರಾಂತಿಗೆ ಮಳೆ ಸಾಧ್ಯತೆ:ಹವಾಮಾನ ಇಲಾಖೆ ಮೂನ್ಸೂಚನೆ

h2-Rain 1
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಜ.14ರಿಂದ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ದಕ್ಷಿಣ ಕರ್ನಾಟಕ ವ್ಯಾಪ್ತಿಯ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಜ.14ರಂದು ಹಾಗೂ ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಜ.15ರಂದು ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಬೀದರ್​, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿಯಲ್ಲಿ ಮುಂದಿನ 3 ದಿನ ಮಂಜು ಜಾಸ್ತಿ ಬೀಳಲಿದೆ. ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ. ಕೆಲ ಜಿಲ್ಲೆಗಳಲ್ಲಿ ಮಾತ್ರ ಕನಿಷ್ಠ ಹಾಗೂ ಗರಿಷ್ಠ ತಾಪಮಾನದಲ್ಲಿ ಸರಾಸರಿ 1-2 ಡಿ.ಸೆ.ಉಷ್ಣಾಂಶ ಕುಸಿತವಾಗಲಿದೆ. ರಾತ್ರಿ ವೇಳೆ ಶೀತ ಗಾಳಿಯೂ ಬೀಸಲಿದೆ ಎಂದು ಇಲಾಖೆಯ ನಿರ್ದೇಶಕ ಸಿ.ಎಸ್​.ಪಾಟೀಲ್​ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net