ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

rain
Published on

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದ್ದು, ನಾಳೆ, ನಾಡಿದ್ದು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಶುಕ್ರವಾರ ಉತ್ತರ ಕನ್ನಡದ ಹೊನ್ನಾವರ 150 ಮಿಮೀ, ಶಿರಾಲಿ 110 ಮಿಮೀ, ಕುಮಟಾ 100 ಮಿಮೀ, ಕದ್ರಾ ಮತ್ತು ಗೋಕರ್ಣ ತಲಾ 70 ಮಿಮೀ, ಉಡುಪಿ 90 ಮಿಮೀ ಹಾಗೂ ಕುಂದಾಪುರ 70 ಮಿಮೀ ಮಳೆಯಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಜೂ 27, 28 ರಂದು ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಜೂ 25, 26ರಂದು ಹಾಗೂ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net