ಯುಗಾದಿ ಹಬ್ಬಕ್ಕೆ ಮಳೆ ಭೀತಿ: 3 ದಿನ ಬಳಿಕ ಉತ್ತರ ಕರ್ನಾಟಕದಲ್ಲಿ ತಾಪಮಾನ ಹೆಚ್ಚಳ

sri rain
ಶೃಂಗೇರಿಯಲ್ಲಿ ಮಳೆಯಾಗುತ್ತಿದ್ದಾಗ ಕಂಡುಬಂದ ದೃಶ್ಯ.
Published on

ಬೆಂಗಳೂರು:ರಾಜ್ಯದ ಕೆಲವೆಡೆ ಮುಂದುವರಿದಿರುವ ಬೇಸಿಗೆ ಮಳೆ, ಯುಗಾದಿ ಹಬ್ಬದಲ್ಲಿ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ದಕ್ಷಿಣ ಕನ್ನಡ,ಉಡುಪಿಯಲ್ಲಿ ಮಾ.25ರಿಂದ ಮಾ.26ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ. ಅಲ್ಲದೆ, ದಕ್ಷಿಣ ಕರ್ನಾಟಕ, ಕರಾವಳಿ ವ್ಯಾಪ್ತಿಯ ಕೆಲ ಜಿಲ್ಲೆಗಳಲ್ಲಿ ಮಾ.30ರಿಂದ ಮುಂದಿನ 2 ದಿನ ವರ್ಷಧಾರೆಯಾಗಲಿದೆ. ಕೆಲವಡೆ ಮಳೆ ಜೊತೆಗೆ ಬಿರುಗಾಳಿಯೂ ಬೀಸಲಿದೆ.

3 ದಿನ ಬಳಿಕ ಉಷ್ಣಾಂಶ ಹೆಚ್ಚಳ: ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ ಮುಂದಿನ 3 ದಿನ ಉಷ್ಣಾಂಶದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಆದರೆ, ಇಲ್ಲಿನ ಜಿಲ್ಲೆಗಳಲ್ಲಿ ಮಾ.28ರಿಂದ ಗರಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 2-3 ಡಿ.ಸೆ. ಉಷ್ಣಾಂಶ ಹೆಚ್ಚಳವಾಗುವ ಸಂಭವ ಇದೆ. ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಪ್ರದೇಶ ವ್ಯಾಪ್ತಿಯ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 20 ಡಿ.ಸೆ.ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net